SHIVAMOGGA LIVE NEWS | 14 NOVEMBER 2023
ಶಿವಮೊಗ್ಗ ಜಿಲ್ಲೆಯಲ್ಲಿ ಗೋ ಪೂಜೆ
SHIMOGA : ದೀಪಾವಳಿ ಅಂಗವಾಗಿ ಶಿವಮೊಗ್ಗದಲ್ಲಿ ಗೋ ಪೂಜೆ ನೆರವೇರಿಸಲಾಯಿತು. ಗೋವುಗಳಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಆರತಿ ಬೆಳಗಿ ಗೋವುಗಳಿಗೆ ಹಣ್ಣು, ಅಕ್ಕಿ ನೀಡಲಾಯಿತು. ಗ್ರಾಮೀಣ ಭಾಗದಲ್ಲಿ ಶ್ರದ್ಧಾ ಭಕ್ತಿಯಿಂದ ಗೋ ಪೂಜೆ ನೆರವೇರಿಸಲಾಯಿತು. ನಗರ ಪ್ರದೇಶದಲ್ಲಿ ಗೋವುಗಳನ್ನು ಮನೆಗೆ ಕರೆಯಿಸಿ ಪೂಜೆ ಸಲ್ಲಿಸಲಾಯಿತು.
ಮಂಡಘಟ್ಟದಲ್ಲಿ ಬೈಕ್ ಕಳ್ಳತನ
SHIMOGA : ಮಂಡಘಟ್ಟದ ದೇಗುಲ ಸಮೀಪ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಡಘಟ್ಟದ ರುದ್ರೇಶ್ ಎಂಬುವವರು ಶಿವಮೊಗ್ಗದ ದಿನಸಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮನೆಯಿಂದ ನಿತ್ಯ ಬೈಕ್ ತಂದು ಮಂಡಘಟ್ಟದ ದೇಗುಲದ ಸಮೀಪ ನಿಲ್ಲಿಸಿ ಶಿವಮೊಗ್ಗಕ್ಕೆ ಕೆಲಸಕ್ಕೆ ತೆರಳುತ್ತಿದ್ದರು. ನ.2ರಂದು ಕೆಲಸ ಮುಗಿಸಿ ರಾತ್ರಿ ಬೈಕ್ ನಿಲ್ಲಿಸಿದ್ದ ಜಾಗಕ್ಕೆ ಬಂದಾಗ ಬೈಕ್ ಇರಲಿಲ್ಲ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ನೆಹರೂ ಜನ್ಮದಿನಾಚರಣೆ
SHIMOGA : ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು. ಸಚಿವರಾದ ರಾಜಣ್ಣ, ಡಿ.ಸುಧಾಕರ್, ಮಧು ಬಂಗಾರಪ್ಪ ಅವರು ನೆಹರು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ‘ದೇಶಕ್ಕಾಗಿ, ಸ್ವಾತಂತ್ರ್ಯಕ್ಕಾಗಿ ಸರ್ವವನ್ನು ನೆಹರು ಕುಟುಂಬ ತ್ಯಾಗ ಮಾಡಿತ್ತು. ನೆಹರು ಅವರ ಜ್ಞಾಪಕಾರ್ಥ ಒಂದು ತಿಂಗಳು ವಿವಿಧ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸುವ ಶಿವಮೊಗ್ಗ ಕಾಂಗ್ರೆಸ್‌ನ ನಡೆ ಸ್ವಾಗತಾರ್ಹ. ಮುಂದಿನ ಪೀಳಿಗೆಗೆ ಇತಿಹಾಸ ಮನವರಿಕೆ ಮಾಡಿಕೊಡಬೇಕು. ಇತಿಹಾಸ ತಿಳಿದವರಷ್ಟೆ ಇತಿಹಾಸ ಸೃಷ್ಟಿಸಲು ಸಾಧ್ಯʼ ಎಂದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಪ್ರಸನ್ನ ಕುಮಾರ್ ಸೇರಿದಂತೆ ಹಲವರು ಇದ್ದರು.
ತುಮರಿ ಆಸ್ಪತ್ರೆಗೆ ವೈದ್ಯರ ನೇಮಕ್ಕೆ ಆಗ್ರಹ
TUMARI : ಸಾಗರ ತಾಲೂಕು ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಒಂದು ತಿಂಗಳಿಂದ ವೈದ್ಯರಿಲ್ಲದೆ ಸ್ಥಳೀಯರು ಸಂಕಷ್ಟಕ್ಕೀಡಾಗಿದ್ದಾರೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗು ಜನರು ಲಾಂಚ್ ಮೂಲಕ ಸಾಗರ ತಾಲುಪಬೇಕಾಗಿದೆ. ಶೀಘ್ರ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರನ್ನು ನೇಮಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಅಕ್ರಮ ಮದ್ಯ ಮಾರಾಟ, ಪೊಲೀಸ್ ದಾಳಿ
RIPPONPETE : ಖಾಲಿ ಜಾಗದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾಮದ ಮನೆಯೊಂದರ ಪಕ್ಕದ ಖಾಲಿ ಜಾಗದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿತ್ತು. ದಾಳಿ ನಡೆಸಿದ ಪೊಲೀಸರು ಮದ್ಯ ಮತ್ತು ಮಾರಾಟಗಾರರನ್ನು ವಶಕ್ಕೆ ಪಡೆದ್ದಾರೆ. ಪಿಎಸ್‌ಐ ಪ್ರವೀಣ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ಇದನ್ನೂ ಓದಿ – ಕಾರ್ಮಿಕನ ಕಾಲಿನ 2 ಬೆರಳು ಕಟ್, 2 ಕೈ ಕತ್ತರಿಸಲು ಸಿದ್ಧವಾದ ಡಾಕ್ಟರ್, ಮೂವರ ವಿರುದ್ಧ ಕೇಸ್, ಏನಿದು ಪ್ರಕರಣ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200