ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 25 JUNE 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಆಗುಂಬೆಯಲ್ಲಿ ಅತಿ ಹೆಚ್ಚು ಮಳೆ
AGUMBE : ಶಿವಮೊಗ್ಗ ಜಿಲ್ಲೆಯಲ್ಲಿ ಆಗುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗಿದೆ (Monsoon Rain). ಕಳೆದ 24 ಗಂಟೆ ಅವಧಿಯಲ್ಲಿ 57.50 ಮಿ.ಮೀ ಮಳೆಯಾಗಿದೆ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ಆಗುಂಬೆಯಲ್ಲಿ ಅತಿ ಹೆಚ್ಚು ಮಳೆಯಾಗುವ (Monsoon Rain) ಕಾರಣ ಇದನ್ನು ದಕ್ಷಿಣ ಭಾರತದ ಚಿರಾಪೂಂಜಿ ಎಂದು ಕರೆಯಲಾಗುತ್ತದೆ. ಆದರೆ ವರ್ಷದಿಂದ ವರ್ಷಕ್ಕೆ ಆಗುಂಬೆಯಲ್ಲಿ ಮಳೆ ಪ್ರಮಾಣ ಕ್ಷೀಣವಾಗುತ್ತಿದೆ ಎಂದು ಅಧ್ಯಯನಗಳು ತಿಳಿಸಿವೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಆನವಟ್ಟಿ, ಸೊರಬ, ತೀರ್ಥಹಳ್ಳಿಗೆ ಸಚಿವ ಮಧು ಬಂಗಾರಪ್ಪ
SHIMOGA : ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ (Madhu Bangarappa) ಅವರು ಜೂ.27ರಂದು ಶಿವಮೊಗ್ಗ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 4 ಗಂಟೆಗೆ ಬೆಂಗಳೂರಿನಿಂದ ಹೊರಟು ಬೆಳಗ್ಗೆ 9.30ಕ್ಕೆ ಸೊರಬದ ಆನವಟ್ಟಿ ತಲುಪಲಿದ್ದಾರೆ. ಆನವಟ್ಟಿಯಲ್ಲಿ ಸಚಿವರ ಸ್ಥಳೀಯ ಕಚೇರಿ ಉದ್ಘಾಟನೆ ನಡೆಸಿ, ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಸೊರಬ ಪ್ರವಾಸಿ ಮಂದಿರ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ, ಅಹವಾಲು ಸ್ವೀಕರಿಸಲಿದ್ದಾರೆ. ಮಧ್ಯಾಹ್ನ 3ಕ್ಕೆ ತೀರ್ಥಹಳ್ಳಿಯ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದಾರೆ. 3.30ಕ್ಕೆ ತಾಲೂಕು ಕಚೇರಿಯಲ್ಲಿ ತಾಲೂಕಿನ ಪ್ರಗತಿ ಸಭೆ ನಡೆಸಲಿದ್ದಾರೆ. ಸಂಜೆ 5ಕ್ಕೆ ತೀರ್ಥಹಳ್ಳಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಸಾಲ ಬಾಧೆ, ರೈತ ಆತ್ಮಹತ್ಯೆ
RIPPONPETE : ಸಾಲ ಬಾಧೆಯಿಂದ ಮನನೊಂದಿದ್ದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ (Farmer Suicide) ಮಾಡಿಕೊಂಡಿದ್ದಾರೆ. ಹೊಸನಗರ ತಾಲೂಕು ಅರಸಾಳು ಗ್ರಾಮದ ಸುರೇಶ್ (55) ಎಂಬುವವರು ಮೃತ ರೈತ. ಬ್ಯಾಂಕ್ ಮತ್ತು ವಿವಿಧ ಹಣಕಾಸು ಸಂಸ್ಥೆಗಳಲ್ಲಿ ಸುರೇಶ್ ಅವರು ಬೆಳೆ ಸಾಲ ಪಡೆದಿದ್ದರು. ಆದರೆ ಸಾಲ ಮರಪಾವತಿ ಮಾಡಲು ಸಾಧ್ಯವಾಗದೆ ಮನನೊಂದಿದ್ದರು ಎಂದು ಆರೋಪಿಸಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಷ್ಟ್ರೀಯ ಭಾವೈಕ್ಯತಾ ಶಿಬಿರದ ಸಮಾರೋಪ
SHIMOGA : ಸಹ್ಯಾದ್ರಿ ಕಾಲೇಜಿನಲ್ಲಿ (Sahyadri College) ಆಯೋಜಿಸಿದ್ದ ಎನ್‌ಎಸ್‌ಎಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಮುಖ್ಯ ಅತಿಥಿ ಕುವೆಂಪು ವಿವಿ ಸಿಂಡಿಕೇಟ್ ಸದಸ್ಯ ಪದ್ಮೇಗೌಡ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಸ್ತು, ಸಂಯಮ ಅಗತ್ಯ. ಶೈಕ್ಷಣಿಕ ಪಠ್ಯಗಳಿಂದ ಕಲಿಯುವುದಕ್ಕಿಂತಲು ಸಮಾಜದಿಂದ ಕಲಿಯುವುದು ಬಹಳಷ್ಟಿದೆ ಎಂದರು. ಸಹ್ಯಾದ್ರಿ ಕಾಲೇಜು ಪ್ರಾಚಾರ್ಯ ಡಾ.ಕೆ.ಬಿ.ಧನಂಜಯ ಅಧ್ಯಕ್ಷತೆ ವಹಿಸಿದ್ದರು. ಸಹ್ಯಾದ್ರಿ ನಾರಾಯಣ ಹೃದಯಾಲಯದ ವ್ಯವಸ್ಥಾಪಕ ರಾಜಾ ಸಿಂಗ್, ಸಹ್ಯಾದ್ರಿ ವಿಜ್ಞಾನ ಕಾಲೇಜು ಪ್ರಾಂಶುಪಾಲರಾದ ಡಾ.ರಾಜೇಶ್ವರಿ, ವಾಣಿಜ್ಯ ಕಾಲೇಜು ಪ್ರಾಂಶಪಾಲರಾದ ಡಾ. ಎಂ.ಕೆ.ವೀಣಾ, ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ಪರಿಸರ ನಾಗರಾಜ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – IMPACT | ಶಿವಮೊಗ್ಗ ಲೈವ್.ಕಾಂ ವರದಿ ಬಳಿಕ ಜೈಲ್ ಸರ್ಕಲ್‌ಗೆ ಹೊಸ ಲುಕ್, ಏನೇನಾಗಿದೆ ಈಗ?
ಒಕ್ಕಲಿಗರ ಸಂಘದಿಂದ ಕೆಂಪೇಗೌಡ ಜಯಂತಿ
SHIMOGA : ಜಿಲ್ಲಾ ಒಕ್ಕಲಿಗರ (Vokkaliga) ಸಂಘ, ವಿವಿದ ಒಕ್ಕಲಿಗ ಸಂಘಟನೆಗಳು, ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯಿತಿ ವತಿಯಿಂದ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಜೂ.27ರಂದು ನಾಡಪ್ರಭು ಕೆಂಪೇಗೌಡ (Kempegowda) ಜಯಂತಿ ಅಚರಿಸಲಾಗುತ್ತಿದೆ. ಬೆಳಗ್ಗೆ 11ಕ್ಕೆ ಕಾರ್ಯಕ್ರಮ ಉದ್ಘಾಟನೆಯಾಗಲಿದೆ ಎಂದು ಒಕ್ಕಲಿಗರ ಸಂಘದ ಅಧ್ಯಕ್ಷ ಹೆಚ್.ಟಿ.ಆದಿಮೂರ್ತಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.