SHIVAMOGGA LIVE | 11 JULY 2023
ಜೆಎನ್‌ಎನ್‌ಸಿಇ ಕಾಲೇಜಿನಲ್ಲಿ ಟೆಕ್ ಕ್ರಂಚ್
SHIMOGA : ಜೆಎನ್ಎನ್ ಇಂಜಿನಿಯರಿಂಗ್ (Engineering) ಕಾಲೇಜಿನ ಎಂಸಿಎ ವಿಭಾಗದ ವತಿಯಿಂದ ಜು.12 ರಂದು ಎಂಬಿಎ-ಎಂಸಿಎ ಸಭಾಂಗಣದಲ್ಲಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ‘ಟೆಕ್ ಕ್ರಂಚ್’ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬೆಳಗ್ಗೆ 10 ಗಂಟೆಗೆ ಉದ್ಘಾಟನೆ ನಡೆಯಲಿದೆ. ಜೀ ಕನ್ನಡದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸ್ಟಾಂಡ್ ಅಪ್ ಕಾಮಿಡಿಯನ್ ರಾಘವೇಂದ್ರ ಆಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇಡೀ ದಿನ ವಿವಿಧ ಸ್ಫರ್ಧೆಗಳನ್ನು ಏರ್ಪಡಿಸಲಾಗಿದ್ದು, ಐಸ್ ಬ್ರೇಕರ್, ಟಾಗಲ್, ಐಟಿ ಮ್ಯಾನೇಜರ್, ಮ್ಯಾಡ್ ಆ್ಯಡ್ಸ್, ರೀಲ್ಸ್, ಕೋಡಿಂಗ್ ಮತ್ತು ವೆಬ್ ಡಿಸೈನಿಂಗ್ ಸ್ಪರ್ಧೆಗಳು ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಚಿನ್ನದ ಪದಕ ಪಡೆದ ಸಹಶಿಕ್ಷಕಿಗೆ ಶಿಕ್ಷಕರ ಸಂಘದ ಅಭಿನಂದನೆ
SHIMOGA : ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕನ್ನಡ ಎಂ.ಎ ಪದವಿಯಲ್ಲಿ ಪ್ರಥಮ ರ‍್ಯಾಂಕ್ ಪಡೆದ ಶಿವಮೊಗ್ಗದ ಶೈಲಶ್ರೀ ಅವರಿಗೆ 18ನೇ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಂಗಾರದ ಪದಕ ನೀಡಿದರು. ಮೈಸೂರಿನ ಮುಕ್ತ ಗಂಗೋತ್ರಿ ಕ್ಯಾಂಪಸ್‌ನಲ್ಲಿ 18ನೇ ಘಟಿಕೋತ್ಸವ ಸಮಾರಂಭ ನಡೆಯಿತು. ಶೈಲಶ್ರೀ ಮಂಜುನಾಥ ಅವರು ಶಿವಮೊಗ್ಗದ ಬೊಮ್ಮನಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಸಾಧನೆಗೆ ಶಿವಮೊಗ್ಗ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ – ಹಂತಕರ ವಿರುದ್ಧ ಜೈನ ಸಮುದಾಯದ ಆಕ್ರೋಶ, ಕಠಿಣ ಶಿಕ್ಷೆಗೆ ಆಗ್ರಹ | ಗೌರವ ಧನಕ್ಕಾಗಿ ತರಬೇತುದಾರರ ಒತ್ತಾಯ
ಶೈಕ್ಷಣಿಕ ಸಾಲಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
SHIMOGA : ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ 2023-24 ನೇ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತರಿಂದ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ಜುಲೈ 15 ರವರೆಗೆ ವಿಸ್ತರಿಸಲಾಗಿದೆ. ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು, ಪಾರ್ಸಿಗಳು ಮತ್ತು ಆಂಗ್ಲೋ ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ನಿಗಮದ ವೆಬ್‍ಸೈಟ್ http://www.kmdconline.karnataka.gov.in ನಲ್ಲಿ ಭರ್ತಿ ಮಾಡಿದ ಅರ್ಜಿಯ ಪ್ರಿಂಟ್ ಔಟ್ ತೆಗೆದು ಅಗತ್ಯ ದಾಖಲೆಗಳೊಂದಿಗೆ ಜು.15 ರೊಳಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ, ಶಿವಮೊಗ್ಗ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08182-228262 ಗೆ ಸಂಪರ್ಕಿಸಬಹುದು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200