SHIVAMOGGA LIVE | 26 JUNE 2023
‘ಹೂವಿನ ಹಾರ, ಶಾಲು ಬೇಡʼ
BHADRAVATHI : ಶಾಸಕರಾದ (MLA) ಮೇಲೆ ಮೊದಲ ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿದ ಶಾಸಕ ಬಿ.ಕೆ.ಸಂಗಮೇಶ್ವರ ಅವರಿಗೆ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಮತ್ತು ವಿವಿಧ ಸಂಘ, ಸಂಸ್ಥೆಗಳ ಪ್ರತಿನಿಧಿಗಳು ಶುಭ ಕೋರಿದರು.
ಈಡಿಗರ ಬೇಡಿಕೆ ಈಡೇರಿಸದಿದ್ದರೆ ಹೋರಾಟದ ಎಚ್ಚರಿಕೆ
SHIMOGA : ಈಡಿಗ ಸಮುದಾಯದ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು. ಇಲ್ಲವಾದಲ್ಲಿ ಹೋರಾಟ ಅನಿವಾರ್ಯವಾಗಲಿದೆ ಎಂದು ರಾಷ್ಟ್ರೀಯ ಈಡಿಗ ಮಹಾ ಮಂಡಳಿಯ ಜಿಲ್ಲಾಧ್ಯಕ್ಷ ಜಿ.ಇ.ಮುರಳೀಧರ್ ಒತ್ತಾಯಿಸಿದರು. ಈಡಿಗ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ನಡೆಸಬೇಕು, ಬ್ರಹ್ಮಶ್ರೀ ನಾರಾಯಣ ಗುರು ಹೆಸರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಸ್ಥಾಪಿಸಬೇಕು, ವಿಧಾನಸೌಧದ ಮುಂದೆ ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರತಿಮೆ ಸ್ಥಾಪಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಾಮೂಹಿಕ ರಂಗ ಪ್ರವೇಶ, ಸೊರಬ, ತೀರ್ಥಹಳ್ಳಿಗೆ ಮಿನಿಸ್ಟರ್ ಭೇಟಿ, ಇಲ್ಲಿದೆ ಮತ್ತಷ್ಟು ಸುದ್ದಿ
ರೈಲ್ವೆ ಮೇಲ್ಸೇತುವೆ ಬೋವ್ ಸ್ಟ್ರಿಂಗ್ ಅಳವಡಿಕೆ
SHIMOGA : ನಗರದ ಕಾಶೀಪುರದಲ್ಲಿ ರೈಲ್ವೆ ಲೆವೆಲ್ ಕ್ರಾಸಿಂಗ್ನಲ್ಲಿ ಮೇಲ್ಸೇತುವೆ ಕಾಮಗಾರಿ ಬಿರುಸು ಪಡೆದಿದೆ. 60 ಮೀಟರ್ ಉದ್ದದ ಸ್ಟೀಲ್ ಬೋವ್ ಸ್ಟ್ರಿಂಗ್ ಅಳವಡಿಸಲಾಗಿದೆ. ಇದರ ತೂಕ 680 ಟನ್. ರೈಲ್ವೆ ಮೇಲ್ಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಇತ್ತೀಚೆಗೆ ತಿಳಿಸಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ‘ಒಂದು ಕಾನೂನಾತ್ಮಕ ಕೊಲೆ’ಗೆ ಭರ್ಜರಿ ರೆಸ್ಪಾನ್ಸ್, ಹೇಗಿತ್ತು ನಾಟಕ? ಇಲ್ಲಿದೆ ಫೋಟೊ ಆಲ್ಬಂ
ಮನೆ ಹೆಂಚು ತೆಗೆದು ಕಳ್ಳತನ, 3 ಅರೆಸ್ಟ್
HOSANAGARA : ಮನೆಯ ಹೆಂಚು ತೆಗೆದು ಒಳ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿದ್ದ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಶಿವಪುರ ಗಂದ್ರಳ್ಳಿ ಗ್ರಾಮದ ಗೋವಿಂದ ನಾಯ್ಕ ಅವರ ಮನೆಯಲ್ಲಿ ಕಳ್ಳತನವಾಗಿತ್ತು. ತನಿಖೆ ನಡೆಸಿದ ಪೊಲೀಸರು ಬಿಳಕಿ ಗ್ರಾಮದ ಸುದರ್ಶನ, ಆದರ್, ಮಧುಸೂದನ್ ಎಂಬುವವರನ್ನು ಬಂಧಿಸಿದ್ದಾರೆ. ಇವರಿಂದ 103 ಗ್ರಾಮ ಚಿನ್ನ ಮತ್ತು ಬೆಳ್ಳಿ ಆಭರಣಗಳು, ಕೃತ್ಯಕ್ಕೆ ಬಳಸಿದ ಬೈಕನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ – SHIMOGA JOBS – ಶಿವಮೊಗ್ಗದಲ್ಲಿ 16 ರಿಂದ 18 ಸಾವಿರ ರೂ. ಸಂಬಳದ ಕೆಲಸ ಖಾಲಿ ಇದೆ
ಲಾಡ್ಜ್, ಬಾರ್ ಅಂಡ್ ರೆಸ್ಟೋರೆಂಟ್ಗೆ ವಿರೋಧ
SHIMOGA : ಪುರಲೆ ಬಡಾವಣೆಯಲ್ಲಿ ಲಾಡ್ಜ್, ಬಾರ್ ಅಂಡ್ ರೆಸ್ಟೋರೆಂಟ್ಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿ ಶ್ರೀ ಸಿದ್ದೇಶ್ವರ ಸೇವಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಮತ್ತು ಮಹಾನಗರ ಪಾಲಿಕೆ ಮೇಯರ್ಗೆ ಮನವಿ ಸಲ್ಲಿಸಲಾಯಿತು. ಪುರಲೆ ಬಡಾವಣೆ ಹೆಚ್ಚು ಜನವಸತಿ ಹೊಂದಿದೆ. ಇಲ್ಲಿ ಲಾಡ್ಜ್ ಮತ್ತು ಅದಕ್ಕೆ ಹೊಂದಿಕೊಂಡಂತೆ ಬಾರ್ ಅಂಡ್ ರೆಸ್ಟೋರೆಂಟ್ ಸ್ಥಾಪಿಸುವುದು ಸರಿಯಲ್ಲ. ಇದರಿಂದ ಮಹಿಳೆಯರು, ಮಕ್ಕಳು ಓಡಾಡುವುದೆ ಕಷ್ಟವಾಗಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಎನ್.ಸಿದ್ದಪ್ಪ, ಮಂಜು, ಪಿ.ಎನ್.ಸಿದ್ದಯ್ಯ, ನಂಜುಂಡಪ್ಪ ಸೇರಿದಂತೆ ಹಲವರು ಇದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200