ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಕೊನೆಯ ದಿನಾಂಕ ಯಾವಾಗ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 SEPTEMBER 2023

SHIMOGA : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ (Scholarship) ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಿಂದಿನ ಸಾಲಿನಲ್ಲಿ ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸುವಂತಿಲ್ಲ.

ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹಿಂದಿನ ಸಾಲಿನಲ್ಲಿ ತಿರಸ್ಕೃತಗೊಂಡು ವಿದ್ಯಾರ್ಥಿವೇತನ (Scholarship) ಪಡೆಯದಿರುವ ವಿದ್ಯಾರ್ಥಿಗಳು. ಹಿಂದೆ ಅರ್ಜಿ ಸಲ್ಲಿಸದಿರುವ ಮತ್ತು 2023-24 ನೇ ಸಾಲಿನ ಹೊಸ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಇಲಾಖೆಯ ವೆಬ್‌ಸೈಟ್‌ www.sw.kar.nic.in ಮತ್ತು http://ssp.karnataka.gov.in ನಲ್ಲಿ ಅ.20 ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಶಿವಮೊಗ್ಗದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ : 08182-240512 ನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ – ಮಧ್ಯರಾತ್ರಿಯಲ್ಲು ಗಾಂಧಿ ಬಜಾರ್‌ ಮುಂದೆ ಜಮಾಯಿಸಿದ್ದರು ಸಾವಿರಾರು ಜನ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment