ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
Shubodaya Shivamogga
ಶುಭೋದಯ ಶಿವಮೊಗ್ಗ ನೀವು ಸರಿಯಾದ ಮಾರ್ಗದಲ್ಲಿ ಸಾಗಿದರೆ ಜೀವನವು ನಿಮಗೆ ಅರ್ಹವಾದ ಎಲ್ಲವನ್ನೂ ನೀಡುತ್ತದೆ
- ಇವತ್ತಿನ ಪಂಚಂಗ – ಶುಭ ಸಮಯ ಯಾವುದು? ಓದಲು ಇಲ್ಲಿ ಕ್ಲಿಕ್ ಮಾಡಿ
- ದಿನ ಭವಿಷ್ಯ – 12 ರಾಶಿಗಳ ಭವಿಷ್ಯ, ಶುಭ ಬಣ್ಣ, ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
- ಶಿವಮೊಗ್ಗ ಜಿಲ್ಲೆಯ ಇವತ್ತಿನ ಹವಾಮಾನ ವರದಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಜಿಲ್ಲೆಯ 4 ಪ್ರಮುಖ ಸುದ್ದಿಗಳು
» ಬೃಹತ್ ಸೇತುವೆ ಕಾಮಗಾರಿ ಪರಿಶೀಲನೆ
ಹೊಸನಗರ : ಸಮೀಪದ ಸುತ್ತ ಬಳಿ ಹಿನ್ನೀರು ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ ಸೇತುವೆ ಕಾಮಗಾರಿಯನ್ನು ಸಂಸದ ಬಿ.ವೈ.ರಾಘವೇಂದ್ರ ಪರಿಶೀಲಿಸಿದರು. ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಸುಬ್ರಮಣ್ಯ ಮತ್ತಿಮನೆ, ಒಬಿಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎನ್. ಸುಧಾಕರ್, ಪಟ್ಟಣ ಪಂಚಾಯಿತಿ ಸದಸ್ಯ ಹಾಲಗದ್ದೆ ಉಮೇಶ್ ಗೌಡ, ಪ್ರಮುಖರಾದ ಟಿ.ಡಿ. ಮೇಘರಾಜ್ ಸೇರಿ ಹಲವರು ಇದ್ದರು.
» ಜಿಲ್ಲೆಯ ವಿವಿಧೆಡೆ ಗುಡುಗು, ಗಾಳಿ ಸಹಿತ ಮಳೆ
ಶಿವಮೊಗ್ಗ : ಜಿಲ್ಲೆಯ ವಿವಿಧೆಡೆ ಗುಡುಗು, ಭಾರಿ ಗಾಳಿ ಸಹಿತ ಜೋರು ಮಳೆಯಾಗಿದೆ. ಶಿವಮೊಗ್ಗ ನಗರದಲ್ಲಿ ಸಂಜೆ ವೇಳೆ ಮಳೆಯಾಗಿದೆ. ತಾಲ್ಲೂಕಿನ ಹಲವು ಕಡೆಗಳಲ್ಲೂ ಮಳೆಯಾಗಿದೆ. ಭದ್ರಾವತಿ, ಶಿಕಾರಿಪುರ, ಸೊರಬ, ಶಿರಾಳಕೊಪ್ಪ, ಸಾಗರ, ಆನಂದಪುರ, ಹೊಸನಗರ, ತುಮರಿ ಬ್ಯಾಕೋಡು ಸುತ್ತಮುತ್ತ ಗುಡುಗು- ಸಿಡಿಲು ಸಹಿತ ಸಾಧಾರಣ ಮಳೆಯಾಗಿದೆ. ಸಾಗರ ತಾಲ್ಲೂಕಿನ ಮಾಸೂರಿನಲ್ಲಿ ಶನಿವಾರ ರಾತ್ರಿ ಸುರಿದ ಗಾಳಿ, ಮಳೆಗೆ ಉಮೇಶ್ ಅವರ ಮನೆಯ ಚಾವಣಿ ಪೂರ್ಣ ಹಾರಿಹೋಗಿದೆ.
» ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಏಪ್ರಿಲ್ 28, 29ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಏ.28ರಂದು ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಏ. 29ರಂದು ಬೆಳಗ್ಗೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯುವ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
» ಮರು ಮೌಲ್ಯಮಾಪನ, ರಾಜ್ಯಕ್ಕೆ ಪ್ರಥಮ ಸ್ಥಾನ
ತೀರ್ಥಹಳ್ಳಿ : ಪಿಯುಸಿ ಪರೀಕ್ಷೆಯಲ್ಲಿ ಉತ್ತರ ಪತ್ರಿಕೆಯ ಮರು ಮೌಲ್ಯಮಾಪನದಲ್ಲಿ ಒಂದು ಅಂಕ ಹೆಚ್ಚಿಗೆ ಪಡೆದು ತೀರ್ಥಹಳ್ಳಿಯ ದೀಕ್ಷಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇಲ್ಲಿನ ವಾಗ್ದೇವಿ ಪಿ.ಯು. ಕಾಲೇಜಿನ ದೀಕ್ಷಾ ರಸಾಯನಶಾಸ್ತ್ರದಲ್ಲಿ 100ಕ್ಕೆ 99 ಅಂಕ ಪಡೆದಿದ್ದರು. ಉಳಿದ ವಿಷಯಗಳಲ್ಲಿ 100 ಅಂಕ ಪಡೆದು ಒಟ್ಟು 599 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದರು. ರಸಾಯನಶಾಸ್ತ್ರ ಉತ್ತರ ಪತ್ರಿಕೆ ಮರು ಮೌಲ್ಯಮಾಪನದಲ್ಲಿ ಒಂದು ಅಂಕ ಹೆಚ್ಚಿಗೆ ಪೆದಿದ್ದು, ಎಲ್ಲ ವಿಷಯಗಳಲ್ಲು 100 ಅಂಕ ಪಡೆದಿದ್ದಾರೆ. ಹಾಗಾಗಿ ಒಟ್ಟು ಅಂಕಗಳು 599ರ ಬದಲಾಗಿ 600 ಅಂಕಗಳಾಗಿವೆ.

LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





