SHIVAMOGGA LIVE | 25 JUNE 2023
ಹಗಲು ಹೊತ್ತಿನಲ್ಲೂ ಉರಿಯುತ್ತಿವೆ ಬೀದಿ ದೀಪ
SHIMOGA : ನಗರದ ವಿವಿಧ ಬಡಾವಣೆಗಳಲ್ಲಿ ಹಗಲು ಹೊತ್ತಿನಲ್ಲಿಯು ಬೀದಿ ದೀಪಗಳು (Street Lights) ಉರಿಯುತ್ತಿವೆ. ಶಿವಮೊಗ್ಗದ ಅಚ್ಚುತರಾವ್ ಬಡಾವಣೆ, ವೆಂಕಟೇಶನಗರ, ಗಾಂಧಿ ನಾಗರದ ಕೆಲವು ರಸ್ತೆಗಳಲ್ಲಿ ಮೂರ್ನಾಲ್ಕು ದಿನ, ಹಗಲು ಮತ್ತು ರಾತ್ರಿ ವಿದ್ಯುತ್ ದೀಪಗಳು (Street Lights) ನಿರಂತರವಾಗಿ ಉರಿಯುತ್ತಿವೆ. ರಾಜ್ಯದಲ್ಲಿ ವಿದ್ಯುತ್ ಅಭಾವ ಉಂಟಾಗಿದೆ. ಇಂತಹ ಸಂದರ್ಭದಲ್ಲಿಯು ಹಗಲು ಹೊತ್ತಿನಲ್ಲಿಯು ವಿದ್ಯುತ್ ದೀಪ ಉರಿಸುತ್ತಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಮುಂಗಾರು ಚುರುಕು, ಶಿವಮೊಗ್ಗದಲ್ಲಿ ಮಳೆ
SHIMOGA : ವಿಳಂಬವಾಗಿ ಆರಂಭವಾಗಿರುವ ಮುಂಗಾರು (Monsoon Rain) ಈಗ ಕರ್ನಾಟಕ ರಾಜ್ಯದಾದ್ಯಂತ ಆವರಿಸಿದೆ. ಇನ್ನು, ಶಿವಮೊಗ್ಗ ಜಿಲ್ಲೆಯಾದ್ಯಂತ ಅಲ್ಲಲ್ಲಿ ಮಳೆಯಾಗುತ್ತಿದೆ. ಕೆಲವು ಕಡೆ ತುಂತುರು ಮಳೆಯಾದರೆ ಇನ್ನು ಕೆಲವೆಡೆ ಜೋರಾಗಿ ಮಳೆಯಾಗುತ್ತಿದೆ. ಮುಂಗಾರು ವಿಳಂಬದಿಂದಾಗಿ ಚಿಂತೆಗೀಡಾಗಿದ್ದ ರೈತರ ಮೊಗದಲ್ಲಿ ಈಗ ಮಂದಹಾಸ ಮೂಡಿದೆ. ಶಿವಮೊಗ್ಗ ನಗರದಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದೆ. ಆಗಾಗ ಬಿಸಿಲು ಮತ್ತು ಸಣ್ಣ ಪ್ರಮಾಣದಲ್ಲಿ ಮಳೆಯಾಗುತ್ತಿದೆ.
ಇದನ್ನೂ ಓದಿ – ಮಧ್ಯರಾತ್ರಿ ಶಿವಮೊಗ್ಗ KSRTC ಬಸ್ ನಿಲ್ದಾಣದಲ್ಲಿ ಪ್ರಯಾಣಿಕನಿಗೆ ಶಾಕ್, ಕಂತೆ ಕಂತೆ ಹಣದ ಬ್ಯಾಗ್ ಮಿಸ್ಸಿಂಗ್
ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆ
SHIMOGA : ಜಿಲ್ಲೆಯಾದ್ಯಂತ (Shivamogga Rain) ಕಳೆದ 24 ಗಂಟೆಯಲ್ಲಿ 17 ಮಿ.ಮೀ ಮಳೆಯಾಗಿದೆ. ಜೂ.24ರಂದು ವಾಡಿಕೆ ಮಳೆ 19 ಮಿ.ಮೀ ಇದೆ. ಆದರೆ ಶೇ.13ರಷ್ಟು ಮಳೆ ಕೊರತೆಯಾಗಿದೆ. ಕಳೆದ ಒಂದು ವಾರದಲ್ಲಿ ವಾಡಿಕೆಯಂತೆ 102 ಮಿ.ಮೀ ಮಳೆಯಾಗಬೇಕಿತ್ತು. ಆದರೆ 36 ಮಿ.ಮೀ.ನಷ್ಟು ಮಾತ್ರ ಮಳೆಯಾಗಿದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ – ಚಂದ್ರಗುತ್ತಿ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ, ಎಷ್ಟು ಕಾಣಿಕೆ ಸಂಗ್ರಹವಾಗಿದೆ?
ಬೈಕ್ ಕಳ್ಳನನ್ನು ಬಂಧಿಸಿದ ಭದ್ರಾವತಿ ಪೊಲೀಸ್
BHADRAVATHI : ಎಟಿಎಂ ಕೇಂದ್ರದ ಮುಂದೆ ನಿಲ್ಲಿಸಿದ್ದ ಟಿವಿಎಸ್ ವಿಕ್ಟರ್ ಬೈಕ್ ಕಳ್ಳತನ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು (Bike Thief) ಬಂಧಿಸಿದ್ದಾರೆ. ಆತನಿಂದ ಎರಡು ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಹಳೆ ನಗರ ಠಾಣೆ ಪೊಲೀಸರು ಬೆಳಕಟ್ಟೆ ಗ್ರಾಮದ ಪ್ರಭು ಅಲಿಯಾಸ್ ಕೋಳಿ (28) ಎಂಬಾತನನ್ನು ಬಂಧಿಸಿದ್ದಾರೆ. 80 ಸಾವಿರ ರೂ. ಮೌಲ್ಯದ ಎರಡು ಬೈಕುಗಳನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ – ಕಳ್ಳತನ ಮಾಡುವಾಗ ಊರವರಿಗೆ ಸಿಕ್ಕಿಬಿದ್ದ ಕಳ್ಳ | ಪ್ರಯಾಣಿಕನಿಗೆ ಹೃದಯಾಘಾತ | ಇಲ್ಲಿದೆ ಮತ್ತಷ್ಟು ಸುದ್ದಿಗಳು
ಬಸ್ ನಿಲ್ದಾಣದಲ್ಲಿ ಅಪರಿಚಿತನ ಮೃತದೇಹ
RIPPONPETE : ಹೃದಯಾಘಾತ (Cardiac Arrest) ಸಂಭವಿಸಿ ಸುಮಾರು 60 ವರ್ಷದ ವ್ಯಕ್ತಿಯೊಬ್ಬರು ಬಸ್ ನಿಲ್ದಾಣದಲ್ಲಿಯೆ ಮೃತಪಟ್ಟಿದ್ದಾರೆ. ವಿನಾಯಕ ವೃತ್ತದ ಬಸ್ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಇವರು ಛತ್ರಿ ರಿಪೇರಿ ಮಾಡಿಕೊಂಡು ಜೀವನ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಪಿಎಸ್ಐ ಎಸ್.ಪಿ.ಪ್ರವೀಣ್, ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200