SHIVAMOGGA LIVE | 16 JULY 2023
ಲೈಂಗಿಕ ದೌರ್ಜನ್ಯ, ಯುವಕನಿಗೆ 10 ವರ್ಷ ಜೈಲು
SHIMOGA : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಭದ್ರಾವತಿಯ ಯುವಕನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೊ) ಶಿಕ್ಷೆ ಪ್ರಕಟಿಸಿದೆ. 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1.50 ಲಕ್ಷ ರೂ. ದಂಡ ವಿಧಿಸಲಾಗಿದೆ. ಲೈಂಗಿಕ ದೌರ್ಜನ್ಯ ಸಂಬಂಧ ತನಿಖೆ ನಡೆಸಿ ಹೊಳೆಹೊನ್ನೂರು ಠಾಣೆ ಪೊಲೀಸರು ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಶಿಕ್ಷೆ ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಹರಿಪ್ರಸಾದ್ ವಾದ ಮಂಡಿಸಿದ್ದರು.
ಇದನ್ನೂ ಓದಿ – ಶಿವಮೊಗ್ಗ ಕೃಷ್ಣ ಕೆಫೆ ಬಳಿ ಇಂದಿರಾ ಕ್ಯಾಂಟೀನ್‌ಗೆ ದಿಢೀರ್ ಭೇಟಿ ನೀಡಿ ಹೌಹಾರಿದ ಕಾಂಗ್ರೆಸ್ ನಿಯೋಗ
ವೀಲಿಂಗ್ ಮಾಡುತ್ತಿದ್ದ ಇಬ್ಬರಿಗೆ ದಂಡ
SHIMOGA : ನಗರದ ಪ್ರಮುಖ ಕಾಲೇಜುಗಳ ಮುಂದೆ ಬೈಕ್ ವೀಲಿಂಗ್ (Stunt) ಮಾಡುತ್ತಿದ್ದ ಆರೋಪ ಮೇಲೆ ಇಬ್ಬರು ಯುವಕರಿಗೆ ಶಿವಮೊಗ್ಗ ಸಂಚಾರ ಠಾಣೆ ಪೊಲೀಸರು ದಂಡ ವಿಧಿಸಿದ್ದಾರೆ. ಕಾಲೇಜುಗಳ ಬಳಿ ಯುವಕರು ಬೈಕ್ ವೀಲಿಂಗ್ ಮಾಡುತ್ತಿದ್ದರು. ಈ ಕುರಿತು ಫೋಟೊ, ವಿಡಿಯೋಗಳು ಪೊಲೀಸರಿಗೆ ಲಭ್ಯವಾಗಿತ್ತು. ವೀಲಿಂಗ್ ಮಾಡುತ್ತಿದ್ದ ಮಂಜುನಾಥ ಮತ್ತು ಲೋಕೇಶ್‌ನನ್ನು ಸಂಚಾರ ಠಾಣೆ ಸಿಬ್ಬಂದಿ ರಾಘವೇಂದ್ರ ಪತ್ತೆ ಹಚ್ಚಿದ್ದರು. ಸಂಚಾರ ಠಾಣೆ ಇನ್ಸ್‌ಪೆಕ್ಟರ್ ಸಂತೋಷ್ ಕುಮಾರ್ ಅವರು ಇಬ್ಬರಿಗು ದಂಡ ವಿಧಿಸಿ, ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ MLA ಕಚೇರಿಯಲ್ಲಿ ವಾಟ್ಸಪ್ ಹೆಲ್ಪ್‌ಲೈನ್ ಶುರು, ಏನಿದು? ಹೇಗಿರುತ್ತೆ? ಜನಕ್ಕೇನು ಉಪಯೋಗ?
ಕೆಎಸ್‌ಆರ್‌ಟಿಸಿಯಿಂದ ಪರಿಹಾರದ ಚೆಕ್ ವಿತರಣೆ
SHIMOGA : ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಕೆಎಸ್‌ಆರ್‌ಟಿಸಿ ವತಿಯಿಂದ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು. 2021ರ ಡಿಸೆಂಬರ್‌ನಲ್ಲಿ ಬಾಣಾವರದ ಚಿಕ್ಕಾರಹಳ್ಳಿ ಗೇಟ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತಕ್ಕೀಡಾಗಿ ಕಸಲ್ಯ (52) ಎಂಬುವವರು ಮೃತಪಟ್ಟಿದ್ದರು. ತಿರುವಣ್ಣಾಮಲೈ – ಬೆಂಗಳೂರು – ಶಿವಮೊಗ್ಗ ಮಾರ್ಗದ ಬಸ್‌ನಲ್ಲಿ ಘಟನೆ ಸಂಭವಿಸಿತ್ತು. ಕೌಸಲ್ಯ ಅವರ ಪತಿಗೆ 3 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಜಿ.ವಿಜಯ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200