ಭೀಕರ ಅಪಘಾತ, ಮೃತ 13 ಮಂದಿಯ ಗುರುತು ಪತ್ತೆ, ಎಮ್ಮೆಹಟ್ಟಿಯಲ್ಲಿ ಹೇಗಿದೆ ಪರಿ‍ಸ್ಥಿತಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 JUNE 2024

BHADRAVATHI / HAVERI : ಮನೆ ದೇವರ (temple) ದರ್ಶನ ಮಾಡಿ, ಹೊಸ ವಾಹನದ ಪೂಜೆ ಮುಗಿಸಿ ಊರಿಗೆ ಮರಳುವ ಹೊತ್ತಿಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 13 ಮಂದಿ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡಿರುವ ನಾಲ್ವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಹೊಸ ಟಿಟಿಗೆ ಮನೆ ದೇವರಿಂದ ಪೂಜೆ

ಭದ್ರಾವತಿ ತಾಲೂಕು ಎಮ್ಮೆಹಟ್ಟಿಯ ಆದರ್ಶ, ಚಾಲಕ ವೃತ್ತಿ ಮಾಡುತ್ತಿದ್ದರು. ಈಚೆಗೆ ಟಿಟಿ ವಾಹನ ಖರೀದಿ ಮಾಡಿದ್ದರು. ಈ ಹಿನ್ನೆಲೆ ಕುಟುಂಬದವರ ಜೊತೆಗೆ ಮನೆ ದೇವರು ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿ ಟಿಟಿ ವಾಹನಕ್ಕೆ ಪೂಜೆ ಸಲ್ಲಿಸಿ, ಬಳಿಕ ವಿವಿಧ ದೇಗುಲಗಳಿಗೆ ಭೇಟಿ ನೀಡಿದ್ದರು. ಇವತ್ತು ಬೆಳಗ್ಗೆ ಎಮ್ಮೆಹಟ್ಟಿ ಗ್ರಾಮಕ್ಕೆ ಮರಳಬೇಕಿತ್ತು. ಆದರೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್‌ ಬಳಿ ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿಯಾಗಿ 13 ಮಂದಿ ಸಾವನ್ನಪ್ಪಿದ್ದಾರೆ.

tempo-traveller-incident-at-Haveri-driver-adarsh.

ಒಂದೇ ಕುಟುಂಬ, ಒಂದೇ ಗ್ರಾಮ

ಅಪಘಾತದಲ್ಲಿ ಮೃತಪಟ್ಟವರೆಲ್ಲ ಒಂದೇ ಕುಟುಂಬದವರು. ಟಿಟಿ ಚಾಲಕ ಆದರ್ಶ ಅವರ ತಂದೆ, ತಾಯಿ ಮತ್ತು ಸಂಬಂಧಿಕರು ಜೊತೆಗೆ ಪ್ರವಾಸಕ್ಕೆ ತೆರಳಿದ್ದರು. ಮೃತರನ್ನು ಆದರ್ಶ (23), ಪರಶುರಾಮ್ (45), ಭಾಗ್ಯ (40), ನಾಗೇಶ್ (50), ವಿಶಾಲಾಕ್ಷಿ (50), ಸುಭದ್ರಾ ಭಾಯಿ (65), ಪುಣ್ಯಾ ಬಾಯಿ (50), ಮಂಜುಳಾ ಬಾಯಿ (57), ಮಾನಸಾ (24), ರೂಪಾ (40), ಮಂಜುಳಾ (50), 4 ವರ್ಷದ ಮಗು ಮತ್ತು 6 ವರ್ಷದ ಮಗು ಮೃತರು ಎಂದು ಗುರುತಿಸಲಾಗಿದೆ.

Emmehatti

ಎಮ್ಮೆಹಟ್ಟಿ ಗ್ರಾಮದಲ್ಲಿ ದಿಗ್ಭ್ರಮೆ, ಸ್ಥಳಕ್ಕೆ ದೌಡು

ಹಾವೇರಿಯಲ್ಲಿ ಟಿಟಿ ವಾಹನ ಅಪಘಾತಕ್ಕೀಡಾದ ವಿಷಯ ತಿಳಿಯುತ್ತಿದ್ದಂತೆ ಹೊಳೆಹೊನ್ನೂರು ಠಾಣೆ ಪೊಲೀಸರು ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ್ದರು. ಪ್ರವಾಸಕ್ಕೆ ತೆರಳಿದ್ದವರ ಕುರಿತು ಗ್ರಾಮಸ್ಥರಿಂದ ಮಾಹಿತಿ ಸಂಗ್ರಹಿಸಿದರು. ವಿಚಾರ ತಿಳಿದು ಗ್ರಾಮಸ್ಥರಲ್ಲಿ ದಿಗ್ಭ್ರಮೆ ಉಂಟಾಗಿದೆ. ಗ್ರಾಮದ ಪ್ರಮುಖು, ಮೃತರ ಸಂಬಂಧಿಗಳು, ಸ್ನೇಹಿತರು ಕೂಡಲೆ ಹಾವೇರಿಗೆ ತೆರಳಿದ್ದಾರೆ. ಸದ್ಯ ಎಮ್ಮಹಟ್ಟಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.

Emmehatti

ಹಾವೇರಿ ರಕ್ಷಣಾಧಿಕಾರಿ ಏನಂದ್ರು?‌

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಹಾವೇರಿ ಜಿಲ್ಲಾ ರಕ್ಷಣಾಧಿಕಾರಿ ಅಂಶುಕುಮಾರ್‌, ರಸ್ತೆ ಬದಿಯಲ್ಲಿ ಲಾರಿ ನಿಲ್ಲಿಸಲಾಗಿತ್ತು. ಹಿಂಬದಿಯಿಂದ ಟಿಟಿ ವಾಹನ ಡಿಕ್ಕಿಯಾಗಿದೆ. ಘಟನೆಯಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ಪೈಕಿ ಇಬ್ಬರು ಪುರುಷರು, ಇಬ್ಬರು ಮಕ್ಕಳು, ಉಳಿದವರೆಲ್ಲ ಮಹಿಳೆಯರು. ಆಸ್ಪತ್ರೆಯಲ್ಲಿ ಒಬ್ಬ ವೃದ್ಧೆ ಮತ್ತು ಯುವತಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಗಂಭೀರವಾಗಿದೆ. ಟಿಟಿ ವಾಹನ ಹಿಂಬದಿಯಿಂದ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ ಎಂಬುದು ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ತಿಳಿಸಿದರು.

Emmehatti

ಇದನ್ನೂ ಓದಿ – ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ, ಶಿವಮೊಗ್ಗ ಮೂಲದ 13 ಮಂದಿ ಸಾವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 28, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment