BREAKING NEWS | ಶಿವಮೊಗ್ಗ ಜಿಲ್ಲೆಯಾದ್ಯಂತ ಪ್ರೌಢಶಾಲೆ ಸುತ್ತಮುತ್ತ ನಿಷೇಧಾಜ್ಞೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗದ ಲೈವ್.ಕಾಂ | SHIMOGA NEWS | 13 ಫೆಬ್ರವರಿ 2022

ಜಿಲ್ಲೆಯಲ್ಲಿರುವ ಪ್ರೌಢಶಾಲೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ 6ಗಂಟೆಯಿಂದ 144 ಸೆಕ್ಷನ್ ಅಡಿ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ.

nanjappa hospital shimoga covid care center

ಸೋಮವಾರ 10ನೇ ತರಗತಿವರೆಗೆ ಶಾಲೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಚಟುವಟಿಕೆಗಳ ಸುಗಮ ನಿರ್ವಹಣೆಗಾಗಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪ್ರೌಢಶಾಲೆಗಳ ಆವರಣದಿಂದ 200ಮೀಟರ್ ಒಳಗಡೆ ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.

ಯಾವುದೇ ಊಹಾಪೋಹಗಳಿಗೆ ಕಿವಿಗೊಡದೆ, ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಹೋಗಲು ಜಿಲ್ಲಾಡಳಿತದೊಂದಿಗೆ ಎಲ್ಲರೂ ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ | ಶಿವಮೊಗ್ಗ ನಗರದ ವಿವಿಧೆಡೆ ಪೊಲೀಸ್ ರೂಟ್ ಮಾರ್ಚ್

Shimoga Live News Reach Age Wise

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment