ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 18 ಡಿಸೆಂಬರ್ 2019
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿಯಾಗಲಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ.
ನಿಷೇಧಾಜ್ಞೆ ಯಾವಾಗಿನವರೆಗೆ?
ಡಿಸೆಂಬರ್ 18ರ ಮಧ್ಯರಾತ್ರಿಯಿಂದ ಡಿಸೆಂಬರ್ 21ರ ಮಧ್ಯರಾತ್ರಿವರೆಗೆ CRPCಯ ಸೆಕ್ಷನ್ 144ರ ಅನ್ವಯ ಜಿಲ್ಲಾಧಿಕಾರಿ ಅವರು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ತಿಳಿಸಿದ್ದಾರೆ.
ನಿಷೇಧಾಜ್ಞೆಗೆ ಕಾರಣವೇನು?
ಪೌರತ್ವ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿದೆ. ಇದರ ವಿರುದ್ಧ ದೇಶಾದ್ಯಂತ ಹೋರಾಟಗಳು ನಡೆಯುತ್ತಿವೆ. ದಹೆಲಿ, ಪಶ್ಚಿಮ ಬಂಗಾಳ ಸೇರಿದಂತೆ ಹಲವೆಡೆ ಹೋರಾಟಗಳು ಹಿಂಸಾರೂಪ ಪಡೆದುಕೊಂಡಿವೆ. ಕರ್ನಾಟಕ ರಾಜ್ಯಾದ್ಯಂತ ಹೋರಾಟ ನಡೆಸಲು ಕಾಂಗ್ರೆಸ್ ಪಕ್ಷ ಮತ್ತು ಹಲವು ಸಂಘಟನೆಗಳು ನಿರ್ಧರಿಸಿವೆ. ಈ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಶಿವಮೊಗ್ಗದಲ್ಲಿ ಬೃಹತ್ ಹೋರಾಟಕ್ಕೆ ಸಜ್ಜು
ಪೌರತ್ವ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಶಿವಮೊಗ್ಗಲ್ಲಿ ಬೃಹತ್ ಪ್ರತಿಭಟನೆಗೆ ಜಿಲ್ಲಾ ಕಾಂಗ್ರೆಸ್ ಪಕ್ಷ ತೀರ್ಮಾನಿಸಿತ್ತು. ‘ಪೊಲೀಸರು ಮೊದಲಿಂದಲು ನಮ್ಮ ಹೋರಾಟ ನಿಲ್ಲಿಸುವಂತೆ ಒತ್ತಡ ಹೇರುತ್ತಿದ್ದರು. ಈಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ. ಪಕ್ಷದ ನಾಯಕರ ಜೊತೆ ತೀರ್ಮಾನಿಸಿ ಹೋರಾಟದ ರೂಪುರೇಷೆ ಸಿದ್ಧಪಡಿಸಲಿದ್ದೇವೆ. ಜಿಲ್ಲೆಯ ವಿವಿಧೆಡೆಯಿಂದ ಹೋರಾಟಕ್ಕೆ ಜನರು ಬರಲು ಸಿದ್ಧವಾಗಿದ್ದಾರೆ’ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದ್ದಾರೆ.
ನಿಷೇಧಾಜ್ಞೆ ಜಾರಿ ಆಗಿದ್ದು, ಯಾವುದೇ ಶಾಲೆ, ಕಾಲೇಜುಗಳಿಗೆ ಈವರೆಗೆ ರಜೆ ಘೋಷಣೆ ಆಗಿಲ್ಲ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Shimoga Deputy Commissioner has imposed CRPC 144 section, prohibitory order , in the district.