ಶಿವಮೊಗ್ಗ: ಗುಡ್ಡದ ಅರಕೆರೆ ಗ್ರಾಮದ ಎಸ್‌ಡಿಎಚ್ ಲೇಔಟ್‌ನಲ್ಲಿ ನಿರ್ಮಿಸಲಾಗಿದ್ದ ಓವರ್‌ಹೆಡ್ ವಾಟರ್ ಟ್ಯಾಂಕ್‌ಗೆ ಅಳವಡಿಸಿದ್ದ ಸುಮಾರು ₹1.20 ಲಕ್ಷ ಮೌಲ್ಯದ 20 ಪೈಪ್‌ಗಳು ಕಳ್ಳತನವಾಗಿವೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಪುರದಾಳ್ ಗ್ರಾಮ ಪಂಚಾಯಿತಿ ಪಿಡಿಒ ಪರಮೇಶ್ವರಪ್ಪ ಅವರು ನೀಡಿದ ದೂರಿನ ಮೇರೆಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರಿನಲ್ಲಿ ಏನಿದೆ?
ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ವತಿಯಿಂದ ಗುಡ್ಡದ ಅರಕೆರೆ ಎಸ್‌ಡಿಎಚ್ ಲೇಔಟ್‌ನಲ್ಲಿ ಓವರ್‌ಹೆಡ್ ವಾಟರ್ ಟ್ಯಾಂಕ್ ನಿರ್ಮಿಸಿ, ಅದಕ್ಕೆ ವಾಟರ್ ಪೈಪ್‌ಗಳನ್ನು ಅಳವಡಿಸಲಾಗಿತ್ತು. ಜುಲೈ 30ರಂದು ಟ್ಯಾಂಕ್‌ಗೆ ಅಳವಡಿಸಿದ್ದ 20 ಪೈಪ್‌ಗಳು ನಾಪತ್ತೆಯಾಗಿದ್ದವು ಎಂದು ಆರೋಪಿಸಲಾಗಿದೆ. ತುಂಗಾ ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:➤ ಶಿವಮೊಗ್ಗ ಜಿಲ್ಲೆಯಲ್ಲಿ ಮೇವಿನ ಲಭ್ಯತೆ, ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮೇವಿದೆ? ಜಿಲ್ಲಾಧಿಕಾರಿ ಏನಂದ್ರು?