ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಆಗಸ್ಟ್ 2020
ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಈ ನಡುವೆ ಮಳೆಯಿಂದ ಹಾನಿ ಆಗಬಹುದಾದ ಗ್ರಾಮಗಳನ್ನು ಜಿಲ್ಲಾಡಳಿತ ಗುರುತಿಸಿದೆ.
ಎಷ್ಟು ಹಳ್ಳಿಗಳು ಸೂಕ್ಷ್ಮ?
ಮಳೆಯಿಂದಾಗಿ ನದಿ, ಕೆರೆಯಿಂದ ಹಾನಿಗೊಳಗಾಗುವ ಪ್ರದೇಶಗಳನ್ನು ಗುರುತಿಸಿಲಾಗಿದೆ. 200 ಗ್ರಾಮಗಳಲ್ಲಿ ಈ ಪರಿಸ್ಥಿತಿ ಇದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಈ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ವಾಡಿಕೆಗಿಂತಲೂ ಹೆಚ್ಚು ಮಳೆ
ಶಿವಮೊಗ್ಗ ಜಿಲ್ಲೆಯ ಹಲವೆಡೆ ವಾಡಿಕೆಗಿಂತಲೂ ಹೆಚ್ಚು ಮಳೆಯಾಗಿದೆ. 271 ಗ್ರಾಮ ಪಂಚಾಯಿತಿ ಪೈಕಿ 38 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಡಿಕೆಗಿಂತಲೂ ಹೆಚ್ಚು ಮಳೆಯಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ಕಲೆ ಹಾಕಿದೆ.
ಸೂಕ್ಷ್ಮ ಮತ್ತು ವಾಡಿಕೆಗಿಂತಲೂ ಅಧಿಕ ಮಳೆಯಾಗಿರುವ ಗ್ರಾಮಗಳಲ್ಲಿ ಜಿಲ್ಲಾಡಳಿತದ ವತಿಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422