ದ್ವಿತೀಯ ಪಿಯುಸಿ ಫಲಿತಾಂಶ, ಶಿವಮೊಗ್ಗ ಜಿಲ್ಲೆಯ ಶೇ.28ರಷ್ಟು ಅಭ್ಯರ್ಥಿಗಳು ಪಾಸ್, ಪರೀಕ್ಷೆ ಎದುರಿಸಿದವರೆಷ್ಟು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BANGALORE NEWS | 20 ಸೆಪ್ಟೆಂಬರ್ 2021

ಆಗಸ್ಟ್ ಮತ್ತು ಸೆಪ್ಟೆಂಬರ್’ನಲ್ಲಿ ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದ ವಿದ್ಯಾರ್ಥಿಗಳ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಪ್ರಕಟಿಸಿದ್ದಾರೆ.

ಖಾಸಗಿ ವಿದ್ಯಾರ್ಥಿಗಳು, ರಿಸಲ್ಟ್ ತಿರಸ್ಕರಿಸಿದ್ದ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗಿದೆ.

18,413 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು. ಈ ಪೈಕಿ 5,507 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. 12,906 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಶೇ.29.91ರಷ್ಟು ಫಲಿತಾಂಶ ಬಂದಿದೆ. ವಿದ್ಯಾರ್ಥಿಗಳು karresults.nic.in ಲಿಂಕ್ ಮೂಲಕ ಫಲಿತಾಂಶ ನೋಡಬಹುದಾಗಿದೆ.

ಶಿವಮೊಗ್ಗಕ್ಕೆ ಶೇ.28ರಷ್ಟು ಫಲಿತಾಂಶ

ಶಿವಮೊಗ್ಗ ಜಿಲ್ಲೆಯಿಂದ 578 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಈ ಪೈಕಿ 163 ವಿದ್ಯಾರ್ಥಿಗಳು ಮಾತ್ರ ಪಾಸ್ ಆಗಿದ್ದಾರೆ. ಜಿಲ್ಲೆಗೆ ಶೇ. 28.2ರಷ್ಟು ಫಲಿತಾಂಶ ಬಂದಿದೆ.

NH nephrolody%2Bad %2Bkannada 10

ಮರು ಮೌಲ್ಯಮಾಪನ, ಉತ್ತರ ಪತ್ರಿಕೆ ಸ್ಕ್ಯಾನಿಂಗ್

ಒಂದು ವೇಳೆ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿ ಬೇಕಿದ್ದರೆ ಶುಲ್ಕ ಪಾವತಿಸಿ ಸೆಪ್ಟೆಂಬರ್ 25ರೊಳಗೆ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದಾಗಿದೆ. ಸೆಪ್ಟೆಂಬರ್ 27ರಿಂದ ಅಕ್ಟೋಬರ್ 1ರವರೆಗೆ ಉತ್ತರ ಪತ್ರಿಕೆಗಳ ಸ್ಕ್ಯಾನಿಂಗ್ ಪ್ರತಿಗಳನ್ನು ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶವಿದೆ. ಸ್ಕ್ಯಾನಿಂಗ್ ಪ್ರತಿಗಾಗಿ 530 ರೂ. ಶುಲ್ಕ ಪಾವತಿಸಬೇಕಿದೆ.

ಇನ್ನು, ಮರುಮೌಲ್ಯಮಾಪನ ಮತ್ತು ಮರು ಎಣಿಕೆಗೆ ಸೆಪ್ಟೆಂಬರ್ 27ರಿಂದ ಅಕ್ಟೋಬರ್ 5ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕೆ ಅರ್ಜಿ ಸಲ್ಲಿಸುವವರು 1670 ರೂ. ಶುಲ್ಕ ಪಾವತಿಸಬೇಕಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment