ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 9 JANUARY 2023
ಶಿವಮೊಗ್ಗ : ಜಿಲ್ಲೆಯಲ್ಲಿ ವಿವಿಧೆಡೆ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಪಡಿತರ ಅಕ್ಕಿ (rice), ತೂಕ ಮಾಡುವ ಯಂತ್ರ, ಚೀಲ ಹೊಲೆಯುವ ಯಂತ್ರ ಮತ್ತು ಗೋಣಿ ಚೀಲಗಳನ್ನು ವಶಕ್ಕೆ ಪಡಿಸಿಕೊಳ್ಳಲಾಗಿದ್ದು, ಅವುಗಳ ಹರಾಜ ಮಾಡಲು ದಿನಾಂಕ ನಿಗದಿಗೊಳಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುಮಾರು 208.80 ಕ್ವಿಂಟಾಲ್ ಪಡಿತರ ಅಕ್ಕಿ (rice), 4 ತೂಕ ಮಾಡುವ ಯಂತ್ರ, 1 ಚೀಲ ಹೊಲೆಯುವ ಯಂತ್ರ ಹಾಗೂ ಗೋಣಿಚೀಲಗಳನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದುಕೊಂಡಿದ್ದರು. ಈ ಸಂಬಂಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿತ್ತು. ಈ ಅಕ್ಕಿ ಹಾಗೂ ಇತರೆ ಹರಾಜು ಪ್ರಕ್ರಿಯೆಯು ಜನವರಿ 13 ರಂದು ಬೆಳಿಗ್ಗೆ 11.30 ಕ್ಕೆ ನಡೆಯಲಿದೆ.
ಎಪಿಎಂಸಿ ಪರವಾನಗಿ ಹೊಂದಿರುವ ಬಿಡ್ಡುದಾರರು ಹರಾಜಿನಲ್ಲಿ ಭಾಗವಹಿಸಬಹುದಾಗಿದೆ. ಷರತ್ತುಗಳಿಗೆ ಒಳಪಟ್ಟು ಭದ್ರತಾ ಠೇವಣಿ ಪಾವತಿಸಿ ಗೊತ್ತುಪಡಿಸಿದ ದಿನಾಂಕದಂದು ಒಂದು ಗಂಟೆ ಮುಂಚಿತವಾಗಿ ಹಾಜರಿರಬೇಕು. ಎಪಿಎಂಸಿ ಆವರಣದ ಕೆ.ಎಫ್.ಸಿ.ಎಸ್.ಸಿ ಸಗಟು ಮಳಿಗೆಯಲ್ಲಿ ಹರಾಜು ನಡೆಯಲಿದೆ ಎಂದು ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.