ಶಿವಮೊಗ್ಗ ಜಿಲ್ಲೆಯಲ್ಲಿ 23 ಮಂದಿಗೆ ಕರೋನ, ಸೋಂಕಿತರು ಯಾವ್ಯಾವ ತಾಲೂಕಿನವರು? ಚಿಕಿತ್ಸೆ ಪಡೀತಿರೋರೆಷ್ಟು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜುಲೈ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ 23 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ ಇನ್ನೂರರ ಗಡಿ ದಾಟಿದೆ. ಇದರಿಂದ ಜಿಲ್ಲೆಯಲ್ಲಿ ಆತಂಕ ಹೆಚ್ಚಾಗಿದೆ.

ಒಂದೇ ದಿನ 23 ಪಾಸಿಟಿವ್

ಶುಕ್ರವಾರ ಜಿಲ್ಲೆಯಲ್ಲಿ 23 ಮಂದಿಗೆ ಕರೋನ ಸೋಂಕು ತಗುಲಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನ 10, ಭದ್ರಾವತಿಯ 5, ಶಿಕಾರಿಪುರದ 4, ತೀರ್ಥಹಳ್ಳಿ, ಸಾಗರ, ಸೊರಬ, ಹೊಸನಗರ ತಾಲೂಕಿನ ತಲಾ ಒಬ್ಬರಿಗೆ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಟ್ರಾವಲ್ ಹಿಸ್ಟರಿ ಇಲ್ಲದವರಿಗೂ ಸೋಂಕು ತಗುಲಿದೆ. ಸಮುದಾಯದ ಹಂತದಲ್ಲಿ ಸೋಂಕು ಹರಡುತ್ತಿದೆ ಎಂದು ಜನ ಆತಂಕಕ್ಕೀಡಾಗಿದ್ದಾರೆ.

ಈಗೆಷ್ಟು ಸೋಂಕಿತರಿದ್ದಾರೆ?

ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 222ಕ್ಕೆ ಏರಿಕೆಯಾಗಿದೆ. ಈ ಪೈಕಿ 101 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. 1040 ಮಂದಿಯ ರಿಪೋರ್ಟ್ ಇನ್ನೂ ಬರಬೇಕಿದೆ. ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆ 45ಕ್ಕೆ ಏರಿಕೆಯಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment