ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಒಂದೇ ದಿನ 28 ಮಂದಿ ಕರೋನದಿಂದ ಗುಣಮುಖ, ಆರು ಮಂದಿಗಷ್ಟೇ ಪಾಸಿಟಿವ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜುಲೈ 2020

ಶಿವಮೊಗ್ಗದಲ್ಲಿ ಕರೋನ ಪಾಸಿಟಿವ್ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇವತ್ತು ಆರು ಮಂದಿಗೆ ಸೋಂಕು ತಗುಲಿದೆ. ಈ ನಡುವೆ ಒಂದೇ ದಿನ 28 ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದು, ಜಿಲ್ಲೆಯ ಪಾಲಿಗೆ ನೆಮ್ಮದಿ ಮೂಡಿಸಿದೆ.

ಯಾರಿಗೆಲ್ಲ ಸೋಂಕು ತಗುಲಿದೆ?

ಪಿ31737 | 26 ವರ್ಷದ ಮಹಿಳೆ | ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ

ಪಿ31753 | 5 ವರ್ಷದ ಬಾಲಕ | ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ

ಪಿ31912 | 38 ವರ್ಷದ ಪುರುಷ | ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ

ಪಿ31921 | 32 ವರ್ಷದ ಮಹಿಳೆ | ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ

ಪಿ31930 | 21 ವರ್ಷದ ಪುರುಷ | ಐಎಲ್‍ಐ

ಪಿ31943 | 46 ವರ್ಷದ ಮಹಿಳೆ | ತೀವ್ರ ಉಸಿರಾಟದ ತೊಂದರೆ (SARI)

Mc Gann Hospital 2 2

ಒಂಭತ್ತು ಮಂದಿ ಐಸಿಯುನಲ್ಲಿ

ಶಿವಮೊಗ್ಗದಲ್ಲಿ ಕರೋನಾಗೆ ಚಿಕಿತ್ಸೆ ಪಡೆಯುತ್ತಿರುವವರ ಪೈಕಿ ಒಂಭತ್ತು ಮಂದಿಯನ್ನು ಐಸಿಯುನಲ್ಲಿ ಇರಿಸಲಾಗಿದೆ. ವೃದ್ಧರು ಮತ್ತು ಇತರೆ ಆರೋಗ್ಯ ಸಮಸ್ಯೆ ಇವರುವವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

28 ಮಂದಿ ಗುಣ, ಡಿಸ್ಚಾರ್ಜ್

ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಪ್ರತಿದಿನ ಸೋಂಕಿತರ ಸಂಖ್ಯೆ ಎರಡಂಕಿ ದಾಟುತ್ತಿತ್ತು. ಇದು ತೀವ್ರ ಆತಂಕ ಮೂಡಿಸಿತ್ತು. ಆದರೆ ಇವತ್ತು ಸೋಂಕಿತರ ಸಂಖ್ಯೆ ಇಳಿಮುಖವಾಗಿರುವುದು ನೆಮ್ಮದಿ ಮೂಡಿಸಿದ್ದರೆ, 28 ಮಂದಿ ಗುಣವಾಗಿದ್ದಾರೆ. ಇದು ಜಿಲ್ಲೆಯ ಜನರು ನಿಟ್ಟುಸಿರು ಬಿಡುವಂತೆ ಮಾಡಿದೆ.

ಇನ್ನೆಷ್ಟು ಮಂದಿಗೆ ಚಿಕಿತ್ಸೆ ನಡೆಯುತ್ತಿದೆ?

ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 378ಕ್ಕೆ ಏರಿಕೆಯಾಗಿದೆ. ಈ ಪೈಕಿ 169 ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನು 205 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment