
ಶಿವಮೊಗ್ಗ ಲೈವ್.ಕಾಂ | SHIMOGA | 9 ಮೇ 2020
ಕಳೆದ ಒಂದು ವಾರದ ಅವಧಿಯಲ್ಲಿ ಹೊರ ರಾಜ್ಯಗಳಿಂದ ಶಿವಮೊಗ್ಗ ಜಿಲ್ಲೆಗೆ 289 ಮಂದಿ ಆಗಮಿಸಿದ್ದಾರೆ. ಇವರಿಗೆಲ್ಲ ಆರೋಗ್ಯ ತಪಾಸಣೆ ಬಳಿಕ ಕ್ವಾರಂಟೈನ್ಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಶಿವಕುಮಾರ್, ಕಳೆದ ಎರಡು ದಿನಗಳಲ್ಲಿ ವಿವಿಧ 7 ರಾಜ್ಯಗಳಿಂದ ಒಟ್ಟು 148 ಮಂದಿ ಜಿಲ್ಲೆಗೆ ಆಗಮಿಸಿದ್ದಾರೆ. ಇವರಲ್ಲಿ ತೆಲಂಗಾಣದಿಂದ 13, ಕೇರಳದಿಂದ 2, ಗೋವಾದಿಂದ 73, ಮಹಾರಾಷ್ಟ್ರ 12, ತಮಿಳುನಾಡು 23, ರಾಜಸ್ತಾನ 16, ಗುಜರಾತ್ನಿಂದ 9 ಮಂದಿ ಬಂದಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಸಹ್ಯಾದ್ರಿ ಕಾಲೇಜಲ್ಲಿ ಸಮಗ್ರ ತಪಾಸಣೆ
ಜಿಲ್ಲೆಗೆ ಆಗಮಿಸುವ ಪ್ರತಿಯೊಬ್ಬರನ್ನು ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಸಮಗ್ರ ಆರೋಗ್ಯ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಅತಿ ಹೆಚ್ಚು ಕರೋನಾ ಪ್ರಕರಣಗಳು ಕಂಡು ಬಂದಿರುವ ‘ಹೈರಿಸ್ಕ್ ರಾಜ್ಯ’ಗಳಿಂದ ಅಗಮಿಸಿರುವವರನ್ನು ಸಾಂಸ್ಥಿಕ ಕ್ವಾರೆಂಟೈನ್ಗೆ ಒಳಪಡಿಸಲಾಗುತ್ತಿದೆ. ಇನ್ನುಳಿದ ರಾಜ್ಯಗಳಿಂದ ಆಗಮಿಸಿದವರನ್ನು ಹೋಂ ಕ್ವಾರೆಂಟೈನ್ಗೆ ಕಳುಹಿಸಲಾಗಿದೆ. ಕ್ವಾರಂಟೈನ್ನಲ್ಲಿ ಇರುವ ಪ್ರತಿಯೊಬ್ಬರ ಮೇಲೆ ನಿರಂತರ ನಿಗಾ ಇರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]