ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಜುಲೈ 2020
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಕರೋನ ಆರ್ಭಟ ಮುಂದುವರೆದಿದೆ. 30 ಮಂದಿಗೆ ಪಾಸಿಟಿವ್ ಬಂದಿದೆ. ಇದರಿಂದ ಸೋಂಕಿತರ ಸಂಖ್ಯೆ ಆರು ನೂರರ ಸನಿಹಕ್ಕೆ ಬಂದು ನಿಂತಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇವತ್ತಿನ 30 ಸೋಂಕಿತರು ಸೇರಿ ಒಟ್ಟು ಸೋಂಕಿತರ ಸಂಖ್ಯೆ 598ಕ್ಕೆ ಏರಿಕೆಯಾಗಿದೆ. ಈ ನಡುವೆ ಜಿಲ್ಲೆಯಲ್ಲಿ ಇವತ್ತು 330 ಮಂದಿಯ ರಿಪೋರ್ಟ್ ನೆಗೆಟಿವ್ ಬಂದಿದೆ. ಈವರೆಗೂ 21,841 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 20,261 ಮಂದಿಗೆ ನೆಗೆಟಿವ್ ಬಂದಿದೆ.
ಯಾವ್ಯಾವ ತಾಲೂಕಿನಲ್ಲಿ ಎಷ್ಟು ಸೋಂಕಿತರು?
ಸೋಂಕಿತರ ಪೈಕಿ ಶಿವಮೊಗ್ಗ ತಾಲೂಕಿನವರೇ ಹೆಚ್ಚಿದ್ದಾರೆ. ಶಿವಮೊಗ್ಗ ತಾಲೂಕಿನ 23, ಶಿಕಾರಿಪುರದ 3, ಸಾಗರ 1, ತೀರ್ಥಹಳ್ಳಿಯ ಮೂವರಿಗೆ ಸೋಂಕು ತಗುಲಿದೆ.
ಇವತ್ತು 12 ಮಂದಿ ಡಿಸ್ಚಾರ್ಜ್
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮತ್ತಷ್ಟು ಮಂದಿ ಕರೋನದಿಂದ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 12 ಮಂದಿ ಇವತ್ತು ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು ಗುಣವಾದವರ ಸಂಖ್ಯೆ 239ಕ್ಕೆ ಏರಿದೆ. ಇದು ಜನರಲ್ಲಿ ತುಸು ನೆಮ್ಮದಿ ಮೂಡಿಸಿದೆ.
ಮತ್ತೊಬ್ಬ ಸೋಂಕಿತ ಸಾವು
ಮತ್ತೊಂದೆಡೆ ಸಾವನ್ನಪ್ಪುತ್ತಿರುವ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇವತ್ತು ಕೂಡ ಒಬ್ಬ ಸೋಂಕಿತರು ಸಾವನ್ನಪ್ಪಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.
ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆ ಹೆಚ್ಚಳ
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾದಂತೆ ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆಯು ಏರಿಕೆಯಾಗಿದೆ. ಇವತ್ತು 18 ಕಂಟೈನ್‍ಮೆಂಟ್ ಜೋನ್‍ಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆ 142ಕ್ಕೆ ಏರಿಕೆಯಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
Illi sarakara health bulletin nalli 10 torisidare.. yen dull heltare sarakara davaru