ಶಿವಮೊಗ್ಗ ಲೈವ್
ಶಿವಮೊಗ್ಗ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50ರಷ್ಟು ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.
ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳುವಂತೆ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 32 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ https://kpp.karnataka.gov.in ನಲ್ಲಿ ಕೂಡ ಈ ಶೇ.50 ರಷ್ಟು ರಿಯಾಯಿತಿ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಸಂಖ್ಯೆ: 080-22107705 ನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.
