GOOD MORNING SHIMOGA, 7 AUGUST 2024
ಮನುಷ್ಯ ತನ್ನ ಕೆಲಸದಿಂದ ಶ್ರೇಷ್ಠನಾಗುತ್ತಾನೆಯೇ ಹೊರತು ಹುಟ್ಟಿನಿಂದ ಅಲ್ಲ
![]() |
ಮಳೆ ಇರುತ್ತಾ?
ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದೆ. ಇವತ್ತು ಜಿಲ್ಲೆಯ ವಿವಿಧೆಡೆ ಅಲ್ಲಲ್ಲಿ ಕೆಲವು ಹೊತ್ತು ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ತಾಪಮಾನ ಎಷ್ಟಿರುತ್ತೆ?
ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 22 ಡಿಗ್ರಿ, ತೀರ್ಥಹಳ್ಳಿಯಲ್ಲಿ ಗರಿಷ್ಠ 29 ಡಿಗ್ರಿ, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 28, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಶಿವಮೊಗ್ಗ ಸಿಟಿ ನ್ಯೂಸ್
ಮಲವಗೊಪ್ಪ : ನಿಂತಿದ್ದ ಟಿಪ್ಪರ್ ಲಾರಿಗೆ ಭದ್ರಾವತಿ ಕಡೆಯಿಂದ ಬರುತ್ತಿದ್ದ ಆಂಬುಲೆನ್ಸ್ ಡಿಕ್ಕಿ. ಚಾಲಕನಿಗೆ ಗಂಭೀರ ಗಾಯ. ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲು.
ಮಹಿಳಾ ಠಾಣೆ : ಮದುವೆ ಆಗುವುದಾಗಿ ನಂಬಿಸಿ ವಂಚನೆ ಆರೋಪ. ಮಹಿಳೆಯಿಂದ ದೂರು. ಬಿಜೆಪಿ ಯುವ ಮುಖಂಡ ಶರತ್ ಕಲ್ಯಾಣಿ ಬಂಧನ.
ಡಾ. ಅಂಬೇಡ್ಕರ್ ಭವನ : ಎಟಿಎನ್ಸಿ ಕಾಲೇಜು ಗ್ರಾಜುಯೇಟ್ಸ್ ಡೇ ಕಾರ್ಯಕ್ರಮ. ತಹಶೀಲ್ದಾರ್ ಬಿ.ಎನ್.ಗಿರೀಶ್ ಉದ್ಘಾಟನೆ. ಪ್ರಾಂಶುಪಲರಾದ ಪ್ರೊ. ಪಿ.ಆರ್. ಮಮತಾ ಸೇರಿದಂತೆ ಹಲವರು ಭಾಗಿ.
ಶಿವಮೊಗ್ಗ : ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಎಂ.ಎನ್. ಹಗಡೆ ಇವತ್ತು ಶಿವಮೊಗ್ಗಕ್ಕೆ ಭೇಟಿ. ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಭಾಗಿ.
ಶಿವಮೊಗ್ಗ : ಮುಂಬೈ ಪೊಲೀಸರು ಎಂದು ನಂಬಿಸಿ ಮಹಿಳೆಯೊಬ್ಬರಿಗೆ 79,139 ರೂ. ವಂಚಿಸಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ, ಭದ್ರಾವತಿ ತಾಲೂಕು ಸುದ್ದಿ
ವಿಮಾನ ನಿಲ್ದಾಣ : ನೈಟ್ ಲ್ಯಾಂಡಿಂಗ್ ಕೆಲಸದ ಪುನಾರಂಭಕ್ಕೆ ಡಿಜಿಸಿಎ ಒಪ್ಪಿಗೆ. ಇನ್ನು ಎರಡ್ಮೂರು ತಿಂಗಳು ಕಾಮಗಾರಿ ನಡೆಯಲಿದೆ. ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆ.
ಶಂಕರಘಟ್ಟ : ಔಟ್ಲುಕ್ ಮ್ಯಾಗಜೀನ್ ಪ್ರಕಟಿಸಿರುವ ಭಾರತದ ಸಾರ್ವಜನಿಕ ವಲಯದ ಅತ್ಯುತ್ತಮ ಉನ್ನತ ಶಿಕ್ಷಣ ಸಂಸ್ಥೆಗಳ ರ್ಯಾಂಕಿಂಗ್ನಲ್ಲಿ ಕುವೆಂಪು ವಿಶ್ವವಿದ್ಯಾಲಯ 30ನೇ ಸ್ಥಾನ ಪಡೆದಿದೆ.
ಭದ್ರಾವತಿ : ರಸ್ತೆ ಬದಿ ನಡೆದು ಹೋಗುತ್ತಿದ್ದ ಯುವತಿಗೆ ಬೈಕ್ ಡಿಕ್ಕಿಯಾಗಿದ್ದು, ಗಂಭೀರ ಗಾಯಗೊಂಡಿದ್ದ ಆಕೆ ಸಾವನ್ನಪ್ಪಿದ್ದಾಳೆ. ಸುಕನ್ಯಾ ಮೃತ ದುರ್ದೈವಿ. ಬಿ.ಆರ್.ಪಿಯಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ : ಹಾಡೋನಹಳ್ಳಿಯಲ್ಲಿ ತುಂಗಭದ್ರ ನದಿಯ ಸೋಪಾನಕಟ್ಟೆ, ನದಿಗೆ ಗ್ರಾಮದಿಂದ ಇರುವ ಸಂಪರ್ಕ ರಸ್ತೆ ಹಾಳಾಗಿದೆ. ಇದರ ರಿಪೇರಿಗೆ ಸರ್ಕಾರದಿಂದ ಅನುದಾನ ಬಿಡುಗಡೆಗೆ ವಿಧಾನ ಪರಿಷತ್ ಸದಸ್ಯ ಬಲ್ಕಿಷ್ ಬಾನು ಅವರಿಗೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಸಿ.ಜಗದೀಶ್ವರ್ ಮನವಿ.
ಕೂಡಲಿ : ತುಂಗಭದ್ರಾ ಸಂಗಮ ಸ್ಥಳದಲ್ಲಿ ಕೂಡಲಿ ಸಂಸ್ಥಾನದ ಶ್ರೀ ವಿದ್ಯಾಭಿನವ ವಿದ್ಯಾರಣ್ಯ ಭಾರತಿ ಸ್ವಾಮೀಜಿ ಬಾಗಿನ ಅರ್ಪಿಸಿದರು. ಈ ಸಂದರ್ಭ ಮಠದ ಭಕ್ತರು, ಪ್ರಮುಖರು ಇದ್ದರು.
ಭದ್ರಾವತಿ : ವಿಐಎಸ್ಎಲ್ ಕಾರ್ಖಾನೆ ಬಂಡವಾಳ ಹಿಂತೆಗೆತ ಪಟ್ಟಿಯಿಂದ ಕೈಬಿಡುವಂತೆ ಮನವಿ. ದೆಹಲಿಯಲ್ಲಿ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿಯಾದ ಸಂಸದ ಬಿ.ವೈ.ರಾಘವೇಂದ್ರ, ವಿಐಎಸ್ಎಲ್ ಕಾರ್ಮಿಕರ ನಿಯೋಗ.
ಶಿವಮೊಗ್ಗ ಲೈವ್.ಕಾಂ
ಸಾಗರ, ಹೊಸನಗರ ಸುದ್ದಿ
ರಿಪ್ಪನ್ಪೇಟೆ : ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಗವಟೂರಿನ ಕಾರ್ತಿಕ್ ಮನೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ. ಕುಟುಂಬಕ್ಕೆ ಸಾಂತ್ವನ. 5 ಲಕ್ಷ ರೂ. ಪರಿಹಾರ ನೀಡುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ.
ಸಿಗಂದೂರು : ಶಿರೂರು ಅಂಕೋಲ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಗುಡ್ಡ ಕುಸಿತ ಸ್ಥಳಕ್ಕೆ ಸಿಗಂದೂರು ದೇವಸ್ಥಾನ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಭೇಟಿ. ಸಂತ್ರಸ್ತ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ.
ಸಾಗರ : ಪತ್ರಕರ್ತರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾರ್ಯನಿರತ ಪತ್ರಕರ್ತರ ಸಂಘದ ಸಾಗರ ಶಾಖೆ ವತಿಯಿಂದ ಉಪ ವಿಭಾಗಾಧಿಕಾರಿಗೆ ಮನವಿ.
ಸಾಗರ : ತಾಲೂಕು ಕಚೇರಿಯ ಕಾಮಗಾರಿ ಕಳಪೆಯಾಗಿದ್ದು, ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಳ್ಳಬೇಕು, ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ. ರೈತ ಸಂಘದ ವತಿಯಿಂದ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ.
ಸಾಗರ : ಚಲಿಸುತ್ತಿದ್ದ ಬಸ್ಸಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಜೋಗ ರಸ್ತೆಯಲ್ಲಿ ಘಟನೆ. 12 ಪ್ರಯಾಣಿಕರು ಪ್ರಾಣಪಾಯದಿಂದ ಪಾರು.
ಶಿವಮೊಗ್ಗ ಲೈವ್.ಕಾಂ
ಸೊರಬ, ಶಿಕಾರಿಪುರ ಸುದ್ದಿ
ಸೊರಬ : ಪಟ್ಟಣದ ರಂಗಮಂದಿರದಲ್ಲಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ. ಮಳೆ ಹಾನಿ, ಅರಣ್ಯ ಭೂಮಿಯಲ್ಲಿ ಸಾಗುವಳಿ ಸೇರಿದಂತೆ ಪ್ರಮುಖ ವಿಚಾರಗಳ ಕುರಿತು ಚರ್ಚೆ. ಉಪವಿಭಾಗಾಧಿಕಾರಿ ಡಾ.ಯತೀಶ್, ತಹಶೀಲ್ದಾರ್ ಮಂಜುಳಾ ಹೆಗಡಾಳ್ ಸೇರಿದಂತೆ ಹಲವರು ಭಾಗಿ.
ಸೊರಬ : ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿವಿಧ ವಿಭಾಗಗಳಿಗೆ ಅರೆಕಾಲಿಕ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಕಾಲೇಜಿಗೆ ತೆರಳಿ ಅರ್ಜಿ ಸಲ್ಲಿಸಬಹುದು.
ಸೊರಬ : ದೊಡ್ಡೇರಿ ಗ್ರಾಮದಲ್ಲಿ ಮನೆ ಹಿಂದೆ ಕಾಣಿಸಿಕೊಂಡಿದ್ದ ಹೆಬ್ಬಾವನ್ನು ಉರಗ ರಕ್ಷಕ ಆರಿಫ್ ರಕ್ಷಣೆ ಮಾಡಿದ್ದಾರೆ. ಆರ್ಎಫ್ಒ ಜಾವೀದ್ ಬಾಷಾ ಮಾರ್ಗದಲ್ಲಿ ಹೆಬ್ಬಾವನ್ನು ಕಾಡಿಗೆ ಬಿಡಲಾಯಿತು.
ಶಿಕಾರಿಪುರ : ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ತಡೆಗೆ ಆಗ್ರಹ. ಸಾರ್ವಜನಿಕರಿಂದ ಪುರಸಭೆ ವ್ಯವಸ್ಥಾಪಕ ರಾಜ್ಕುಮಾರ್ ಅವರಿಗೆ ಮನವಿ ಸಲ್ಲಿಕೆ.
ಇದನ್ನೂ ಓದಿ ⇓
ಶಿವಮೊಗ್ಗ ವಿಮಾನ ನಿಲ್ದಾಣ, ನೈಟ್ ಲ್ಯಾಂಡಿಂಗ್ ಕುರಿತು ವಿಮಾನಯಾನ ನಿರ್ದೇಶನಾಲಯ ಮಹತ್ವದ ನಿರ್ಧಾರ ಪ್ರಕಟ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200