GOOD MORNING SHIMOGA, 3 SEPTEMBER 2024
ನೀವು ಧೈರ್ಯಶಾಲಿಯಾಗಲು ಪ್ರಾರಂಭಿಸಿದಾಗ, ನಿಮ್ಮ ಶಕ್ತಿ ಮತ್ತು ಚಾಣಾಕ್ಷತೆ ತಾವಾಗಿಯೇ ಹೆಚ್ಚಾಗುತ್ತದೆ.
» ಇವತ್ತೂ ಜಿಲ್ಲೆಯಲ್ಲಿ ಮಳೆ ಸಾಧ್ಯತೆ
ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಸೋಮವಾರ ಕೆಲ ಹೊತ್ತು ಜೋರು ಮಳೆಯಾಗಿತ್ತು. ಇವತ್ತು ಕೂಡ ಮಳೆ ಸುರಿಯುವ ಸಾಧ್ಯತೆ ಇದೆ. ತಪಮಾನವು ಕೊಂಚ ತಗ್ಗಿದೆ. ಇವತ್ತು ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಗರಿಷ್ಠ 29 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 30 ಡಿಗ್ರಿ, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
SHIMOGA CITY NEWS
ಜಿಲ್ಲಾಧಿಕಾರಿ ಕಚೇರಿ : ಗಣೇಶ ಚತುರ್ಥಿ, ಈದ್ ಮಿಲಾದ್ ಹಬ್ಬಗಳ ಹಿನ್ನೆಲೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧ್ಯಕ್ಷತೆಯಲ್ಲಿ ಸರ್ವಧರ್ಮ ಶಾಂತಿ ಸಭೆ. ವಿವಿಧ ಸಂಘಟನೆಗಳ ಮುಖಂಡರು ಭಾಗಿ.
ಜಿಲ್ಲಾ ಪೊಲೀಸ್ ಕಚೇರಿ : ಶಿವಮೊಗ್ಗಕ್ಕೆ ಎಡಿಜಿಪಿ ಆರ್.ಹಿತೇಂದ್ರ ಭೇಟಿ. ವಿಮರ್ಶಾ ಸಭೆ ನಡೆಸಿದ ಎಡಿಜಿಪಿ. ಹಬ್ಬಗಳ ಸಂದರ್ಭ ಸೂಕ್ತ ಬಂದೋಬಸ್ತ್ಗೆ ಸೂಚನೆ.
ಪತ್ರಿಕಾ ಭವನ : ರಾಜಭವನ ಚಲೋ, ರಾಜ್ಯಪಾಲರ ಅವಹೇಳನ ಸರಿಯಲ್ಲ. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ವಿರುದ್ಧ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಕ್ರೋಶ.
ಶಾಸಕರ ಕಚೇರಿ : ವಿವಿಧ ಅಭಿವೃದ್ಧಿ ನಿಗಮಗಳ ಫಲಾನುಭವಿಗಳಿಗೆ 52.40 ಲಕ್ಷ ರೂ. ಮೌಲ್ಯದ ಮಂಜೂರಾತಿ ಪತ್ರ, ಹೊಲಿಗೆ ಯಂತ್ರ ವಿತರಿಸಿದ ಶಾಸಕ ಎಸ್.ಎನ್.ಚನ್ನಬಸಪ್ಪ.
ಸೋಗಾನೆ : ಬೀಡಿ, ಸಿಗರೇಟ್ ನೀಡುವಂತೆ ಒತ್ತಾಯಿಸಿ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದ ಕೈದಿಗಳು ತಿಂಡಿ ತಿನ್ನದೆ ಪ್ರತಿಭಟನೆ ನಡೆಸಿದ್ದರು.
ಶಿವಮೊಗ್ಗ ನಗರದಲ್ಲಿ ಇಡೀ ದಿನ ಏನೇನಾಯ್ತು? 10 ಸುದ್ದಿ ಒಂದೇ ಕ್ಲಿಕ್ನಲ್ಲಿ ಓದಲಿ ಇಲ್ಲಿ ಕ್ಲಿಕ್ ಮಾಡಿ
» SHIMOGA CITY ಫಟಾಫಟ್ ಸುದ್ದಿ | ಎಲ್ಲೆಲ್ಲಿ ಏನೇನಾಯ್ತು? ಒಂದೇ ಕ್ಲಿಕ್ನಲ್ಲಿ ಎಲ್ಲ ನ್ಯೂಸ್
TALUK NEWS
ಭದ್ರಾವತಿ : ನಗರಸಭೆ ಉಪಾಧ್ಯಕ್ಷ ಚುನಾವಣೆಗೆ ಗೈರಾಗಿ ವಿಪ್ ಉಲ್ಲಂಘಿಸಿದ್ದ ಮೂವರು ಬಿಜೆಪಿ ಸದಸ್ಯರನ್ನು ಪಕ್ಷದಿಂದ ಉಚ್ಛಾಟಿಸಿದ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್. ವಿ.ಕದಿರೇಶ್, ಅನಿತಾ ಮಲ್ಲೇಶ್, ಶಶಿಕಲಾ ನಾರಾಯಣಪ್ಪ ಉಚ್ಚಾಟನೆ.
ಭದ್ರಾವತಿ : ನಗರಸಭೆ ವ್ಯಾಪ್ತಿಯ ಆಸ್ತಿ ತೆರಿಗೆ ಮಾಲೀಕರು ಸೆ.14ರೊಳಗೆ ತೆರಿಗೆ ಪಾವತಿಸಿದರೆ ಶೇ.5ರಷ್ಟು ರಿಯಾಯಿತಿ ಪಡೆಯಬಹುದು ಎಂದು ಪೌರಾಯುಕ್ತ ಪ್ರಕಾಶ್ ಎಂ.ಚೆನ್ನಪ್ಪನವರ್ ತಿಳಿಸಿದ್ದಾರೆ.
ಸಾಗರ : ಬರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾವಿಗ್ಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಕುಸಿತ.
ಸಾಗರ : ಮದುವೆ ಆಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ. ಸಾಗರದ ಖಾಸಗಿ ಕಾಲೇಜಿನ ಉಪನ್ಯಾಸಕನನ್ನು ಬಂಧಿಸಿದ ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು.
ಸೊರಬ : ದಶಕಗಳಿಂದ ಸಾಗುವಳಿ ಮಾಡುತ್ತಿರುವ ರೈತರನ್ನ ಒಕ್ಕಲೆಬ್ಬಿಸುವುದು ಸರಿಯಲ್ಲ. ಅಧಿಕಾರಿಗಳು ಮಾನವೀಯ ನೆಲೆ ಮತ್ತು ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಬಗರ್ ಹಕುಂಸ ಸಮಿತಿ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಸೂಚನೆ.
ತೀರ್ಥಹಳ್ಳಿ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 16 ತಿಂಗಳು ಕಳೆದರು ತೀರ್ಥಹಳ್ಳಿ ಕ್ಷೇತ್ರದ ಅಭಿವೃದ್ಧಿಗೆ ನಯಾಪೈಸೆ ಬಂದಿಲ್ಲ. ವಿದ್ಯಾಧಿರಾಜ ಸಭಾ ಭವನದಲ್ಲಿ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಶಾಸಕ ಆರಗ ಜ್ಞಾನೇಂದ್ರ ಆರೋಪ.
ತೀರ್ಥಹಳ್ಳಿ : ವಾಟ್ಸಪ್ ಸ್ಟೇಟಸ್ನಲ್ಲಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಇಂದಾವರ ಗ್ರಾಮದ ಜಯದೀಪ್ ತುಂಗಾ ನದಿಯ ಸ್ಮಶಾನಕಟ್ಟೆ ಬಳಿ ಶವವಾಗಿ ಪತ್ತೆ.
ಸೊರಬ : ರಂಗಮಂದಿರದಲ್ಲಿ ಜನತಾ ದರ್ಶನ ನಡೆಸಿದ ಸಚಿವ ಮಧು ಬಂಗಾರಪ್ಪ. 200 ಅರ್ಜಿಗಳು ಸ್ವೀಕಾರ.
ಇದನ್ನೂ ಓದಿ » ಭದ್ರಾವತಿ ನಗರಸಭೆಯ ಮೂವರು ಬಿಜೆಪಿ ಸದಸ್ಯರು ಆರು ವರ್ಷ ಪಕ್ಷದಿಂದ ಉಚ್ಛಾಟನೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200