SHIVAMOGGA LIVE NEWS | 19 NOVEMBER 2022
POWER CUT IN TALUK
ಶಿವಮೊಗ್ಗದ ಪ್ರಮುಖ ಮಾಹಿತಿಗಳನ್ನು ಒಳಗೊಂಡ ಮೂರು ಫಟಾಫಟ್ ನ್ಯೂಸ್ ಇನ್ಮುಂದೆ ಪ್ರಕಟವಾಗಲಿದೆ. ನಿಮ್ಮೂರ ಕಾರ್ಯಕ್ರಮಗಳು, ನೀವು ಕಂಡ ಸುದ್ದಿಗಳ ಫೋಟೊ, ವಿಡಿಯೋಗಳನ್ನು 7411700200 ಮೊಬೈಲ್ ನಂಬರ್ ಗೆ ವಾಟ್ಸಪ್ ಮಾಡಬಹುದು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಸೂಗೂರು
ಐದು ಲಕ್ಷ ರೂ. ವೆಚ್ಚದಲ್ಲಿ ಶೌಚಾಲಯ, ಪರಿಷತ್ ಸದಸ್ಯರಿಂದ ಗುದ್ದಲಿ ಪೂಜೆ
ಶಿವಮೊಗ್ಗ : ತಾಲೂಕಿನ ಸೂಗೂರು ಗ್ರಾಮದ ತುಂಗಭದ್ರಾ ಅನುದಾನಿತ ಪ್ರೌಢ ಶಾಲೆಯಲ್ಲಿ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಐದು ಲಕ್ಷ ರೂ. ವೆಚ್ಚದ ಶೌಚಾಲಯ ನಿರ್ಮಾಣಕ್ಕೆ ವಿಧಾನ ಪರಿಷತ್ ಶಾಸಕರಾದ ಡಿ.ಎಸ್.ಅರುಣ್ ಅವರು ಭೂಮಿ ಪೂಜೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಶಾಲಾ ಆಡಳಿತ ಮಂಡಳಿಯವರು, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಶಾಲಾ ಮಕ್ಕಳು ಡಿ. ಎಸ್ ಅರುಣ್ ರವರ ಹುಟ್ಟು ಹಬ್ಬ ಆಚರಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜಪ್ಪ, ಸದಸ್ಯರಾದ ವೀರೇಶ್, ಪ್ರತಿಭಾ, ಲೋಹಿತ್, ರೋಹಿಣಿ, ಭಾಗ್ಯಮ್ಮ, ಲಕ್ಷ್ಮಣ, ಮಲ್ಲಿಕಾರ್ಜುನ್, ನೇತ್ರಾವತಿ, ರಂಗನಾಥ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. POWER CUT IN TALUK
ಶಿವಮೊಗ್ಗ
ಡಿಸಿಸಿ ಬ್ಯಾಂಕ್ ನೇಮಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ, ಕೀ ಉತ್ತರ ಬಿಡುಗಡೆ, ಆಕ್ಷೇಪಣೆ ಆಹ್ವಾನ
ಶಿವಮೊಗ್ಗ : ಜಿಲ್ಲಾ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನ.12 ಮತ್ತು 13ರಂದು ನೇಮಕಾತಿ ಪರೀಕ್ಷೆ ನಡೆಸಲಾಗಿತ್ತು. ನೇಮಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮತ್ತು ಕೀ ಉತ್ತರವನ್ನು ಬ್ಯಾಂಕಿನ ವೆಬ್ ಸೈಟ್ www.shimogadccbank.comನಲ್ಲಿ ಪ್ರಕಟಿಸಲಾಗಿದೆ. ಈ ಕುರಿತು ಯಾವುದೆ ತಕರಾರು ಇದ್ದಲ್ಲಿ ಅಭ್ಯರ್ಥಿಗಳು ನ.25ರೊಳಗಾಗಿ ಬ್ಯಾಂಕಿನ ಪ್ರಧಾನ ಕಚೇರಿಗೆ ಲಿಖಿತವಾಗಿ ಸಲ್ಲಿಸಬಹುದು. ಈ ಕುರಿತು ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರು ಮತ್ತು ನೇಮಕ ಸಮಿತಿ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ALSO READ | ಶಿವಮೊಗ್ಗದ ಖಾಸಗಿ ಬಸ್ ಮಾಲೀಕರಿಗೆ ಪೊಲೀಸರಿಂದ 8 ಖಡಕ್ ಸೂಚನೆ, ತಪ್ಪಿದರೆ ಕ್ರಮದ ಎಚ್ಚರಿಕೆ
ಶಿವಮೊಗ್ಗ
ಶಿವಮೊಗ್ಗ ತಾಲೂಕಿನ ವಿವಿಧೆಡೆ ನ.20ರಂದು ಬೆಳಗ್ಗೆ 10 ರಿಂದ 5ರವರೆಗೆ ಕರೆಂಟ್ ಇರಲ್ಲ
ಶಿವಮೊಗ್ಗ : ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಶಿವಮೊಗ್ಗ ತಾಲೂಕಿನ ವಿವಿಧೆಡೆ ನ.20ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶ್ರೀರಾಮ್ಪುರ, ಭೂಮಿಕಾ ಇಂಡಸ್ಟ್ರೀಸ್, ಪೆಸಿಟ್ ಕಾಲೇಜ್, ಕಿಮ್ಮನೆ ಗಾಲ್ಫ್ ಸ್ಟೇಡಿಯಂ, ಹಾಲದೇವರ ಹೊಸೂರು, ಗುಡ್ಡದ ಹರಕೆರೆ, ಶಕ್ತಿಧಾಮ, ಪೊಲೀಸ್ ಲೇಔಟ್, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ಭೋವಿ ಕಾಲೋನಿ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದ ಹರಕೆರೆ, ವೀರಗಾರನ ಭೈರನಕೊಪ್ಪ, ಅಲ್ಕೊಳ ಸರ್ಕಲ್, ಎಬಿವಿಪಿ ಲೇಔಟ್, ಎಸ್.ವಿ.ಬಡಾವಣೆ, ಹರ್ಷ ಫರ್ನ್ ಹೋಟೆಲ್, ಗಾಡಿಕೊಪ್ಪ, ಮಲ್ಲಿಗೇನಹಳ್ಳಿ, ಶರಾವತಿ ದಂತ ವೈದ್ಯಕೀಯ ಕಾಲೇಜು ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. POWER CUT IN TALUK