ಶಿವಮೊಗ್ಗ ಲೈವ್.ಕಾಂ |SHIMOGA NEWS | 25 NOVEMBER 2020
ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಪುರಲೆ 11 ಕೆ.ವಿ ವಿದ್ಯುತ್ ಕೇಂದ್ರದ ಫೀಡರ್-3ರ ವ್ಯಾಪ್ತಿಯಲ್ಲಿ ವಾಹಕ ಬದಲಾವಣೆ ಕಾಮಗಾರಿ ನಡೆಸುತ್ತಿದೆ. ಹಾಗಾಗಿ ನವೆಂಬರ್ 26 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಕಟ್?
ಹಸೂಡಿ ರಸ್ತೆ, ಮಂಜುನಾಥ ಬಡಾವಣೆ, ವೆಂಕಟೇಶ್ ನಗರ, ಅಮ್ಮುಂಜಿ ರೈಸ್ ಮಿಲ್, ಡಿ.ಎಸ್.ಪಿ. ರಾಜಪ್ಪ ತೋಟ, ಪ್ರಶಾಂತ್ ಇಂಡಸ್ಟ್ರೀಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗ -1ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.