ಶಿವಮೊಗ್ಗ ಲೈವ್.ಕಾಂ | SHIMOGA | 20 ಡಿಸೆಂಬರ್ 2019

ಮೈಕ್ರೋ ಫೈನಾನ್ಸ್ ಸಾಲ ಹಿಂತಿರುಗಿಸಲೇಬೇಕು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಶಿವಮೊಗ್ಗ | ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಪಡೆದ ಸಾಲವನ್ನು ಗ್ರಾಹಕರು ಮರುಪಾವತಿಸಬೇಕು. ಈ ಸಾಲಗಳು ರಾಜ್ಯ ಸರ್ಕಾರದ ಋಣಮುಕ್ತ ಕಾಯ್ದೆ ವ್ಯಾಪ್ತಿಗೆ ಅನ್ವಯ ಆಗುವುದಿಲ್ಲ ಎಂದು ಎಕೆಎಂಐ (ಅಸೋಷಿಯೇಷನ್ ಆಫ್ ಕರ್ನಾಟಕ ಮೈಕ್ರೋಫೈನಾನ್ಸ್ ಇನ್ಸ್’ಟಿಟೂಶನ್) ಸಿಇಒ ವಿ.ಎನ್.ಹೆಗಡೆ ತಿಳಿಸಿದರು. ಮೈಕೋ ಫೆನಾನ್ ಕಂಪನಿಗಳ ಆರ್ಬಿಐ ಅಡಿ ಕೆಲಸ ಮಾಡುತ್ತಿದೆ. ಮಹಿಳೆಯರು ಸ್ವಾವಲಂಬಿ ಆಗಲು ಗುಂಪು ಸಾಲ ನೀಡಲಾಗುತ್ತಿದೆ. ಈ ಸಾಲ ಮರುಪಾವತಿ ಮಾಡಬೇಕು. ಆದರೆ ಕೆಲವರು ಸಾಲಮರುಪಾವತಿ ಮಾಡಬೇಡಿ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಎಕೆಎಂಐ ಕಾರ್ಯದರ್ಶಿ ಶಾಂತಕುಮಾರ್ ಮಾತನಾಡಿ ಶಿವಮೊಗ್ಗ ಜಿಲ್ಲೆಯಲ್ಲೂ 3 ಲಕ್ಷ ಕುಟುಂಬಗಳಿಗೆ ಸಾಲ ನೀಡಲಾಗಿದೆ ಎಂದರು. ಎಕೆಎಂಐ ಕಾರ್ಯನಿರ್ವಾಹಕ ಸದಸ್ಯ ಪಂಚಾಕ್ಷರಿ, ಫೈನಾನ್ಸ್ ಸಂಸ್ಥೆಗಳ ವೆಂಕಟಾನಾಯಕ್, ತೇಜಾನಾಯಕ್ ಇದ್ದರು.
ತಂಬಾಕು ಉತ್ಪನ್ನ ಮಾರುವವರ ಮೇಲೆ ಕೇಸ್
ಹೊಸನಗರ | ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಮತ್ತು ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಅಂಗಡಿ, ಹೊಟೇಲ್’ಗಳ ಮೇಲೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಅಡಿ 22 ಪ್ರಕರಣ ದಾಖಲು ಮಾಡಿದ್ದಾರೆ. 1650 ರೂ. ದಂಡವನ್ನು ವಿಧಿಸಲಾಗಿದೆ. ಹೊಸನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ದಾಳಿ ನಡೆಸಲಾಗಿದೆ. ಪ.ಪಂ ಮುಖ್ಯಾಧಿಕಾರಿ ಬಾಲಚಂದ್ರ, ಶಿವಮೊಗ್ಗ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ರವಿರಾಜ್, ಹೊಸನಗರ ತಾಲೂಕು ಹಿರಿಯ ಆರೋಗ್ಯ ಸಹಾಯಕ ರಮೇಶಾಚಾರ್ ಮತ್ತು ಪೊಲೀಸ್ ಇಲಾಖೆ ಸಂಯುಕ್ತ ಆಶ್ರಯದಲ್ಲಿ ದಾಳಿ ನಡೆಸಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Micro finance loan cannot be withdrawn. Officers raid various shops and hotels in Hosanagara over On KOTPA act. Shivamogga Live