ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 10 ಡಿಸೆಂಬರ್ 2019
NEWS 1 | ‘ದಿನೇಶ್ ಗುಂಡೂರಾವ್ ರಾಜೀನಾಮೆ ಅಂಗೀಕರಿಸಬೇಡಿ’
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ (ಕೆಪಿಸಿಸಿ) ದಿನೇಶ್ ಗುಂಡೂರಾವ್ ಅವರು ನೀಡಿರುವ ರಾಜೀನಾಮೆಯನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಂಗೀಕರಿಸಬಾರದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಒತ್ತಾಯಿಸಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿನ ಹೊಣೆಯನ್ನು ಕೆಪಿಸಿಸಿ ಅಧ್ಯಕ್ಷರ ಮೇಲೆ ಹೊರಿಸುವುದು ಸರಿಯಲ್ಲ. ಅನರ್ಹರ ಗೆಲುವಿಗೆ ಹಣಬಲ ಸೇರಿದಂತೆ ಅನೇಕ ಕಾರಣಗಳಿವೆ. ಕಾಂಗ್ರೆಸ್ ಪಕ್ಷ ಸಾಮೂಹಿಕ ನಾಯಕತ್ವದಡಿ ಕೆಲಸ ಮಾಡುತ್ತದೆ. ಆದ್ದರಿಂದ ರಾಜಿನಾಮೆ ಪತ್ರ ಹಿಂಪಡೆಯಬೇಕು ಎಂದು ಸುಂದರೇಶ್ ಆಗ್ರಹಿಸಿದ್ದಾರೆ.
NEWS 2 | ಮಂಗನಕಾಯಿಲೆಗೆ ಜನಜಾಗೃತಿ
ತೀರ್ಥಹಳ್ಳಿ : ಕಟ್ಟೆಹಕ್ಲು ಗ್ರಾಮದಲ್ಲಿ ಮಂಗನ ಕಾಯಿಲೆ ಕುರಿತು ಜನ ಜಾಗೃತಿ ಮಹಿತಿ ಸಭೆ ಆಯೋಜಿಸಲಾಗಿತ್ತು. ಜಿಲ್ಲಾಧಿಕಾರಿ ಶಿವಕುಮಾರ್ ಸೇರಿದಂತೆ ಪ್ರಮುಖರು ಜಾಗೃತಿ ಸಭೆಯಲ್ಲಿ ಪಾಲ್ಗೊಂಡಿದ್ದರು. ಇದಕ್ಕೂ ಮೊದಲು ಕಟಗಾರುವಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ವಾರ್ಡ್, ಪ್ರಯೋಗಾಲಯ, ಔಷಧಿಗಳ ದಾಸ್ತಾನು ಕೊಠಡಿ, ಹೆರಿಗೆ ವಾರ್ಡ್, ಕಟ್ಟಡ ಮುಂತಾದವುಗಳನ್ನು ಪರಿಶೀಲಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Shimoga Congress President HS Sundaresh has requested AICC President Sonia Gandhi, not to accept the resignation of Dinesh Gundurao.