ಶಿವಮೊಗ್ಗ ಲೈವ್.ಕಾಂ | SHIMOGA | 27 ನವೆಂಬರ್ 2019
NEWS 1 | ಸಿಂಹಧಾಮದಲ್ಲಿ ಚಳಿಗಾಲದ ಶಿಬಿರ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಶಿವಮೊಗ್ಗ : ತಾಲೂಕಿನ ತ್ಯಾವರೆಕೊಪ್ಪದ ಹುಲಿ – ಸಿಂಹಧಾಮದಲ್ಲಿ ಡಿಸೆಂಬರ್ನ ಪ್ರತಿ ಭಾನುವಾರ ವಿದ್ಯಾರ್ಥಿಗಳಿಗೆ ಮೃಗಾಲಯ ನಿರ್ವಾಹಣೆ ಮತ್ತು ಜೀವಿಗಳ ವಿಷಯ ಕುರಿತು ಚಳಿಗಾಲದ ಶಿಬಿರ ಏರ್ಪಡಿಸಲಾಗಿದೆ. ಈ ಶಿಬಿರದಲ್ಲಿ 12 ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳು ಪಾಲ್ಗೊಳಲು ಅವಕಾಶ ಇದ್ದು, ಮೃಗಾಲಯ ನಿರ್ವಾಹಣೆ, ವನ್ಯಜೀವಿ ಆರೋಗ್ಯ ಮತ್ತು ಪರಿಪಾಲನೆ, ಪರಿಸರ ಸಂರಕ್ಷಣೆ, ಪಕ್ಷಿ ವೀಕ್ಷಣೆ, ಸರಿಸೃಪಗಳು, ಸಸ್ತನಿಗಳ ಮಾಹಿತಿ ಮುಂತಾದ ವನ್ಯಜೀವಿಗಳ ಕುರಿತ ಮಾಹಿತಿ ನೀಡಲಾಗುವುದು. ಶಿಬಿರದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ 600 ರೂ.ಗಳ ಶುಲ್ಕ ನಿಗದಿಮಾಡಲಾಗಿದೆ. ವಿದ್ಯಾರ್ಥಿಗಳು ಪೋಷಕರೊಂದಿಗೆ ಹುಲಿ-ಸಿಂಹಧಾಮಕ್ಕೆ ಭೇಟಿ ನೀಡಿ ಶಿಬಿರಕ್ಕೆ ನೋಂದಾಯಿಸಬಹುದು. ಮೊದಲ 30 ಅರ್ಜಿಗಳಿಗೆ ಮಾತ್ರ ಆದ್ಯತೆ ನೀಡಲಾಗುವುದು. ಮಾಹಿತಿಗೆ ಮೊ. 80733 22471 ಸಂಪರ್ಕಿಸಬಹುದು.
NEWS 2 | ಚೆನ್ನೈನಲ್ಲಿ ಶಿವಮೊಗ್ಗದ ವಿದ್ಯಾರ್ಥಿನಿಗೆ ಪ್ರಥಮ ಸ್ಥಾನ
ಚೆನ್ನೈನಲ್ಲಿ ನಡೆದ ಶಾಸ್ತ್ರೀಯ ಸಂಗೀತ ಸ್ಪರ್ಧೆಯಲ್ಲಿ ಶಿವಮೊಗ್ಗದ ಗುರುಗುಹ ಸಂಗೀತ ಮಹಾವಿದ್ಯಾಲಯದ ವಿದ್ಯಾರ್ಥಿನಿ ಮಹತಿ ಭಟ್ ಪಿ.ಎಸ್. ಎರಡು ವಿಭಾಗಗಳಲ್ಲಿ ಪ್ರಥಮ ಸ್ಥಾನಗಳಿಸಿದ್ದಾಳೆ. ಪದ್ಮಭೂಷಣ ವಿದುಷಿ ಸುಧಾ ರಘುನಾಥನ್ ಅವರ ಸುಧಾರ್ಣವ ಸಂಸ್ಥೆಯು ಶ್ರಾವ್ಯ ಸೀಸನ್-1 ಸ್ಪರ್ಧೆಯನ್ನು ಹಮ್ಮಿಕೊಂಡಿತ್ತು. ವಿವಿಧ ರಾಜ್ಯಗಳ ಸುಮಾರು 500ಕ್ಕೂ ಹೆಚ್ಚು ಸ್ಪರ್ಧಿಗಳು ಪಾಲ್ಗೊಂಡಿದ್ದರು. ಕಳೆದ ಮಂಗಳವಾರ ಅಂತಿಮ ಸುತ್ತಿನ ಸ್ಪರ್ಧೆ ನಡೆದಿದ್ದು, ಶ್ರೀ ತ್ಯಾಗರಾಜರ ಕೃತಿಗಳು ಮತ್ತು ಪುರಂದರ ದಾಸರ ಕೃತಿಗಳ ಸಬ್ ಜೂನಿಯರ್ ವಿಭಾಗದಲ್ಲಿ ಮಹತಿ ಭಟ್ ಪ್ರಥಮ ಸ್ಥಾನಿಯಾಗಿದ್ದಾಳೆ. ಡಿಸೆಂಬರ್ನಲ್ಲಿ ಚೆನ್ನೈನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಲಾಗುತ್ತದೆ. ಈಕೆ ಶಿವಮೊಗ್ಗ ಗುರುಗುಹ ಸಂಗೀತ ಮಹಾವಿದ್ಯಾಲಯದ ವಿದ್ವಾನ್ ಶೃಂಗೇರಿ ಎಚ್.ಎಸ್. ನಾಗರಾಜ ಅವರ ಶಿಷ್ಯ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Special camp for childrens have been organized in Tyavarekoppa Lion and Tiger Safar in Shimoga. Mahathi Bhat has won first prize in Chennai.