SHIVAMOGGA LIVE NEWS | 13 AUGUST 2024
ಅಪಘಾತ, ಮಹಿಳೆ ಕಾಲಿನ ಮೂಳೆಗಳು ಕಟ್
ಅನುಪಿನಕಟ್ಟೆ : ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಮಹಿಳೆಯೊಬ್ಬರ ಎರಡು ಕಾಲಿನ ಮೂಳೆ (Bone) ಮುರಿದಿದೆ. ಪುರದಾಳು ಗ್ರಾಮದ ಬಾಗೀರಥಿ ಎಂಬುವವರು ತಮ್ಮ ಮಗನ ಜೊತೆ ದ್ವಿಚಕ್ರ ವಾಹನದಲ್ಲಿ ಶಿವಮೊಗ್ಗ ನಗರಕ್ಕೆ ಬಂದು ಊರಿಗೆ ಮರಳುತ್ತಿದ್ದರು. ಅನುಪಿನಕಟ್ಟೆ ರಿಂಗ್ ರಸ್ತೆಯಲ್ಲಿ ತೆರಳುತ್ತಿದ್ದಾಗ ಪುರದಾಳು ಕಡೆಯಿಂದ ವೇಗವಾಗಿ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ. ಬಾಗೀರಥಿ ಅವರ ಎರಡು ಕಾಲಿನ ಮೊಣಕಾಲಿನ ಕೆಳಭಾಗದಲ್ಲಿ ಮೂಳೆ ಮುರಿದಿದೆ. ಹಿಂಬದಿ ಕುಳಿತಿದ್ದ ಅವರ ಮಗನಿಗೆ ತರಚಿದ ಗಾಯವಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ ⇒ ಅಡಿಕೆ ಧಾರಣೆ | 12 ಆಗಸ್ಟ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಸ್ಪರ್ಧೆ
ಕಲ್ಲಹಳ್ಳಿ : ಕೆ.ಹೆಚ್.ಬಿ.ಕಾಲೋನಿಯಲ್ಲಿರುವ ಮಾಧವ ನೆಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮಾತೆಯರಿಗೆ ಹಾಗೂ 3ನೇ ತರಗತಿಯಿಂದ ದ್ವಿತೀಯ ಪಿಯು ವರೆಗಿನ ವಿದ್ಯಾರ್ಥಿನಿಯರಿಗೆ ಭಗವದ್ಗೀತೆ, ಕಥಾವಾಚನ, ಗಾಯನ, ಚಿತ್ರಕಲೆ, ಪತ್ರಲೇಖನ ಹಾಗೂ ಆಶುಭಾಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಆಸಕ್ತರು ನೋಂದಣಿಗೆ ಹಾಗೂ ಮಾಹಿತಿಗೆ ಮೊಬೈಲ್ ಸಂಖ್ಯೆ 9480431811, 7090521596, 9980085444 ಕರೆಮಾಡಲು ತಿಳಿಸಲಾಗಿದೆ.
ಇದನ್ನೂ ಓದಿ ⇒ ಪ್ರತಿ ತಾಲೂಕಿನಲ್ಲಿ ಬಿಜೆಪಿ ಎರಡು ಭಾಗವಾಗಲಿದೆ, ಹೈಕಮಾಂಡ್ಗೆ ಈಶ್ವರಪ್ಪ 4 ಪಾಯಿಂಟ್ ಎಚ್ಚರಿಕೆ
ಆಗಸ್ಟ್ 15ರಂದ ಸಚಿವರಿಂದ ಧ್ವಜಾರೋಹಣ
ಡಿಎಆರ್ ಮೈದಾನ : ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಗಸ್ಟ್ 15ರ ಬೆಳಿಗ್ಗೆ 9 ಗಂಟೆಗೆ ಸಾಗರ ರಸ್ತೆಯ ಡಿಎಆರ್ ಪೊಲೀಸ್ ಪೆರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪನವರು ಧ್ವಜಾರೋಹಣ ನೆರವೇರಿಸುವರು. ಸಂಸದ, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಜನಪ್ರತಿಧಿನಿಗಳು ಪಾಲ್ಗೊಳ್ಳುವರು. ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ ಸಿಇಓ, ಪಾಲಿಕೆ ಆಯುಕ್ತರು, ಸರ್ಕಾರಿ ಅಧಿಕಾರಿ, ನೌಕರರು, ಸಾರ್ವಜನಿಕರು ಪಾಲ್ಗೊಳ್ಳುವರು. ಅಂದು ಸಂಜೆ 5 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಪೊಲೀಸ್ ಬ್ಯಾಂಡ್ ಮತ್ತು ನಗರದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಅಗ್ನಿವೀರರ ನೇಮಕಾತಿ ರ್ಯಾಲಿ, ಯಾವೆಲ್ಲ ಜಿಲ್ಲೆಯವರಿಗೆ ಇರಲಿದೆ ಅವಕಾಶ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200