ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 56 ಮಂದಿಗೆ ಕರೋನ ಪಾಸಿಟಿವ್, 500ರ ಗಡಿ ದಾಟಿದ ಸೋಂಕಿತರ ಸಂಖ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜುಲೈ 2020

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಒಂದೇ ದಿನ 56 ಮಂದಿಗೆ ಕರೋನ ಪಾಸಿಟಿವ್ ದೃಢವಾಗಿದೆ. ಈ ನಡುವೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 500ರ ಗಡಿ ದಾಟಿದೆ.

ಇವತ್ತು ಬಿಡುಗಡೆಯಾಗಿರುವ ಜಿಲ್ಲಾ ಹೆಲ್ತ್ ಬುಲೆಟಿನ್ ಪ್ರಕಾರ, ಶಿವಮೊಗ್ಗ ಜಿಲ್ಲೆಯಲ್ಲಿ 56 ಮಂದಿಗೆ ಪಾಸಿಟಿವ್ ಬಂದಿದೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 541ಕ್ಕೆ ಏರಿಕೆ ಆಗಿದೆ.

Mc Gann Hospital 2 2

170 ಸ್ಯಾಂಪಲ್ ಸಂಗ್ರಹ

ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗೂ 20,845 ಮಂದಿ ಸ್ವ್ಯಾಬ್ ಟೆಸ್ಟ್ ಮಾಡಲಾಗಿದೆ. ಇವತ್ತು 170 ಮಂದಿ ಪರೀಕ್ಷೆಗೆ ಒಳಗಾಗಿದ್ದಾರೆ. ಈ ಪೈಕಿ 19,146 ಮಂದಿಯ ವರದಿಯ ನೆಗೆಟಿವ್ ಬಂದಿದೆ. ಇವತ್ತು 218 ಮಂದಿಯ ವರದಿ ನೆಗೆಟಿವ್ ಬಂದಿದೆ.

18 ಮಂದಿ ಗುಣ, ಮನೆಗೆ

ಶಿವಮೊಗ್ಗದಲ್ಲಿ ಇವತ್ತು 18 ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇವರನ್ನು ಹೋಂ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ. ಈವರೆಗೂ ಜಿಲ್ಲೆಯಲ್ಲಿ 198 ಮಂದಿಯಷ್ಟೇ ಗುಣವಾಗಿ ಬಿಡುಗಡೆಯಾಗಿದ್ದಾರೆ.

334 ಮಂದಿಗೆ ಚಿಕಿತ್ಸೆ

ಜಿಲ್ಲೆಯಲ್ಲಿ ಈಗ 144 ಮಂದಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಖಾಸಗಿ ಆಸ್ಪತ್ರೆಯಲ್ಲಿ 8 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು, ಕೋವಿಡ್ ಕೇರ್ ಸೆಂಟರ್‍ಗಳಲ್ಲಿ 182 ಮಂದಿಯನ್ನು ಐಸೊಲೇಷನ್ ಮಾಡಲಾಗಿದೆ.

18 ಕಡೆ ಕಂಟೈನ್ಮೆಂಟ್ ಜೋನ್‍ ವಾಪಸ್

ಜಿಲ್ಲೆಯಲ್ಲಿ 124 ಕಡೆ ಕಂಟೈನ್ಮೆಂಟ್ ಜೋನ್ ರಚಿಸಲಾಗಿದೆ. ಈ ಭಾಗದಲ್ಲಿ ನೂರು ಮೀಟರ್ ವ್ಯಾಪ್ತಿಯಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. 18 ಕಡೆ ಕಂಟೈನ್ಮೆಂಟ್ ಜೋನ್‍ಗಳನ್ನು ಮುಕ್ತಗೊಳಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 12, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment