ಶಿವಮೊಗ್ಗದಲ್ಲಿ 61 ಮಂದಿ ಕರೋನದಿಂದ ಗುಣ, 10 ಸೋಂಕಿತರಿಗೆ ಮನೆಯಲ್ಲೇ ಚಿಕಿತ್ಸೆ, ಇವತ್ತೆಷ್ಟು ಪಾಸಿಟಿವ್ ಪ್ರಕರಣಗಳಿವೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

108201177 913463652466879 5491250964400112510 o.jpg? nc cat=100& nc sid=110474& nc ohc=4jItTT6 xksAX98rAT8& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜುಲೈ 2020

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 61 ಮಂದಿ ಕರೋನದಿಂದ ಗುಣವಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದು ಜಿಲ್ಲೆಯ ಜನರು ನಿಟ್ಟುಸಿರು ಬಿಡುವಂತೆ ಮಾಡಿದೆ.

ಇವತ್ತಿನ 61 ಮಂದಿ ಸೇರಿ ಒಟ್ಟು ಗುಣವಾದವರ ಸಂಖ್ಯೆ 489ಕ್ಕೆ ಏರಿಕೆಯಾಗಿದೆ. ಕರೋನ ಸಂಬಂಧ ಆತಂಕದಲ್ಲಿದ್ದವರಿಗೆ ಈ ಸಂಖ್ಯೆ ನೆಮ್ಮದಿ ಮೂಡಿಸಿದೆ.

Mc Gann Hospital 2 2

ಇವತ್ತು ಒಂದು ಡಜನ್ ಪಾಸಿಟಿವ್

ಈ ನಡುವೆ ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಹಲವು ಪಾಸಿಟಿವ್ ಪ್ರಕರಣಗಳು ಕಂಡುಬಂದಿವೆ. ಒಟ್ಟು 12 ಮಂದಿಯಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಒಟ್ಟು ಸೋಂಕಿತರ 869ಕ್ಕೆ ಏರಿಕೆಯಾಗಿದೆ.

107095610 909433912869853 8511875037471527700 o.jpg? nc cat=110& nc sid=110474& nc ohc=2c5Rp1JHkF0AX9 TF6R& nc ht=scontent.fblr1 5

ಯಾವ್ಯಾವ ತಾಲೂಕಲ್ಲಿ ಎಷ್ಟು ಪಾಸಿಟಿವ್?

12 ಪಾಸಿಟಿವ್ ಪ್ರಕರಣಗಳ ಪೈಕಿ ಶಿವಮೊಗ್ಗದ 4, ಭದ್ರಾವತಿಯ 6, ಸಾಗರದ 1, ಶಿಕಾರಿಪುರದ 1 ಪ್ರಕರಣಗಳಿಗೆ. ಈ ನಡುವೆ ಇವತ್ತು 304 ಮಂದಿಯ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇವತ್ತು ಪರೀಕ್ಷೆಗೆ ಒಳಪಡಿಸಿದ ಸ್ಯಾಂಪಲ್‍ಗಳ ಪೈಕಿ 87 ನೆಗೆಟಿವ್ ಬಂದಿವೆ. ಇವೆಲ್ಲ ಬೆಳವಣಿಗೆಗಳ ನಡುವೆ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಬ್ಬ ಕರೋನ ಸೋಂಕಿತ ವ್ಯಕ್ತಿ ಮೃತರಾಗಿದ್ದಾರೆ. ಸೋಂಕಿನಿಂದ ಮೃತರಾದವರ ಒಟ್ಟು ಸಂಖ್ಯೆ 15ಕ್ಕೆ ಹೆಚ್ಚಳವಾಗಿದೆ.

ಹತ್ತು ಮಂದಿಗೆ ಮನೆಯಲ್ಲೇ ಚಿಕಿತ್ಸೆ

ಸೋಂಕಿತರ ಪೈಕಿ 172 ಮಂದಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. 166 ಮಂದಿಗೆ ಕೋವಿಡ್ ಕೇರ್ ಸೆಂಟರ್‍, 17 ಮಂದಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಂದೆಡೆ ಸರ್ಕಾರದ ಮಾರ್ಗಸೂಚಿಯಂತೆ ಹತ್ತು ಮಂದಿಗೆ ಮನೆಯಲ್ಲಿ ಐಸೊಲೇಷನ್ ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು, ಸೋಂಕಿತರ ಸಂಖ್ಯೆ ಹೆಚ್ಚಳವಾದಂತೆ ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆಯು ಏರಿಕೆಯಾಗುತ್ತಿದೆ. ಒಟ್ಟು 246 ಕಂಟೈನ್ಮೆಂಟ್ ಜೋನ್ ರಚಿಸಲಾಗಿದೆ. ಈವರೆಗೆ 45 ಜೋನ್‍ಗಳನ್ನು ಡಿನೋಟಿಫೈ ಮಾಡಲಾಗಿದೆ.

ಓದುಗರ ಗಮನಕ್ಕೆ | ಶಿವಮೊಗ್ಗ ಲೈವ್.ಕಾಂನಲ್ಲಿ ಪ್ರಕಟವಾಗುತ್ತಿರುವ ವರದಿಯು ಶಿವಮೊಗ್ಗ ಜಿಲ್ಲಾಡಳಿತ ಒದಗಿಸುತ್ತಿರುವ ಹೆಲ್ತ್ ಬುಲೆಟಿನ್ ಆಧರಿಸಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಮಾಹಿತಿಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ.

107899250 911221456024432 2372851905210263453 o.jpg? nc cat=100& nc sid=8024bb& nc ohc=tB SDB0SzDwAX82MfB9& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 20, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment