ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಆಗಸ್ಟ್ 2020
ಭಾರಿ ಮಳೆ ಹಿನ್ನೆಲೆ ತುಂಗಾ ಜಲಾಶಯದ ಹೊರ ಹರಿವು ಮತ್ತಷ್ಟು ಹೆಚ್ಚಳವಾಗಿದೆ. ಬುಧವಾರಕ್ಕಿಂತಲೂ ಹೆಚ್ಚಿನ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.
ಹಿನ್ನೀರು ಭಾಗದಲ್ಲಿ ಜೋರು ಮಳೆಯಾಗುತ್ತಿರುವ ಪರಿಣಾಮ ಜಲಾಶಯಕ್ಕೆ 61 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಹಾಗಾಗಿ ಜಲಾಶಯದಿಂದ 66,100 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಈ ಪೈಕಿ 65 ಸಾವಿರ ಕ್ಯೂಸೆಕ್ ನೀರನ್ನು ಹೊಳೆಗೆ ಬಿಡಲಾಗುತ್ತಿದೆ. ಎಲ್ಲಾ ಗೇಟುಗಳನ್ನು ತೆಗೆದು ನೀರನ್ನು ಹೊರ ಬಿಡಲಾಗುತ್ತಿದೆ.
ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರ ಬಿಡುತ್ತಿರುವುದರಿಂದ ಶಿವಮೊಗ್ಗದಲ್ಲಿ ಮಂಟಪ ಮುಳುಗಿದೆ. ಮತ್ತೊಂದೆಡೆ ಹೊಳೆ ದಂಡೆ ಮೇಲಿರುವ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವವರಿಗೆ ಆತಂಕ ಸೃಷ್ಟಿಯಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]