SHIVAMOGGA LIVE NEWS | 16 NOVEMBER 2022
BANGALORE | ಅಡಕೆ ತೋಟಗಳಿಗೆ (Adike farm) ಹಾನಿ ಮಾಡಿರುವ ಎಲೆ ಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರಕಾರದ 7 ತಜ್ಞರನ್ನು ಒಳಗೊಂಡ ಸಮಿತಿ ರಚಿಸಿದೆ. ಮುಂದಿನ ವಾರ ಈ ಸಮಿತಿ ರಾಜ್ಯಕ್ಕೆ ಆಗಮಿಸಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಮಾದ್ಯಮಗಳ ಜತೆ ಮಾತನಾಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಮಲೆನಾಡು ಹಾಗೂ ಕರಾವಳಿ ಭಾಗದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಕೇಂದ್ರ ಸರಕಾರ ತಕ್ಷಣ ಸ್ಪಂದಿಸಿದೆ. ಅಡಕೆ ಬೆಳೆಗೆ ಎದುರಾಗಿರುವ ರೋಗ ನಿವಾರಣೆಗೆ ಸಮಿತಿ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಲಿ ಎಂದರು.
(Adike farm)
ಕ್ಲಿಕ್ ಮಾಡಿ ಇದನ್ನೂ ಓದಿ | ಅಡಕೆ ಧಾರಣೆ | 16 ನವೆಂಬರ್ 2022 | ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಕೆ ರೇಟ್?
ರಾಜ್ಯ ಅಡಕೆ ಬೆಳೆಗಾರರ ಆತಂಕಕ್ಕೆ ಕಾರಣವಾದ ಎಲೆ ಚುಕ್ಕೆ ರೋಗಕ್ಕೆ ಪರಿಹಾರ ಬಯಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ನಿಯೋಗ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿತ್ತು. ಕೇಂದ್ರ ಸರ್ಕಾರ ಸಮಸ್ಯೆ ಪರಿಹಾರಕ್ಕೆ ಪೂರಕವಾಗಿ ಸ್ಪಂದಿಸಿ ಸಮಿತಿ ರಚಿಸಿದೆ ಎಂದು ಆರಗ ಜ್ಞಾನೇಂದ್ರ ತಿಳಿಸಿದರು.
ರಾಜ್ಯದಲ್ಲಿ ಸುಮಾರು 20 ಸಾವಿರ ಹೆಕ್ಟೇರ್ ಪ್ರದೇಶದ ಅಡಿಕೆ ತೋಟ ಎಲೆ ಚುಕ್ಕೆ ರೋಗಕ್ಕೆ ಬಲಿಯಾಗಿದೆ. ನ.22ರಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲುಕಿನಲ್ಲಿ ತಜ್ಞರನ್ನು ಭೇಟಿಯಾಗಿ ಪರಿಸ್ಥಿತಿ ಮನವರಿಕೆ ಮಾಡಿಕೊಡುತ್ತೇನೆ ಎಂದು ತಿಳಿಸಿದರು.
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.