ಶಿವಮೊಗ್ಗ ಲೈವ್.ಕಾಂ | SHIMOGA NEWS | 27 APRIL 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಕರೋನ ಎರಡನೆ ಅಲೆ ವ್ಯಾಪಕವಾಗಿ ಹರಡುತ್ತಿದೆ. ಈ ನಡುವೆ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಸಂಖ್ಯೆಯ ಸೋಂಕಿತರು ಗುಣವಾಗಿದ್ದಾರೆ. ಇದು ತುಸು ನೆಮ್ಮದಿ ಮೂಡಿಸಿದ್ದರೆ, ಒಟ್ಟು ಸೋಂಕಿತರ ಸಂಖ್ಯೆ ಎರಡು ಸಾವಿರದ ಗಡಿಗೆ ತಲುಪಿದೆ. ಇದರಿಂದ ಮತ್ತೆ ಜಿಲ್ಲೆಯಲ್ಲಿ ಭೀತಿ ಹೆಚ್ಚಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 388 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 1991ಕ್ಕೆ ಏರಿಕೆಯಾಗಿದೆ. ಇದು ಆತಂಕಕಾರಿಯಾಗಿದ್ದು, ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಭೀತಿ ಮೂಡಿಸಿದೆ.
ಒಟ್ಟು ಸೋಂಕಿತರ ಪೈಕಿ 1397 ಮಂದಿ ಹೋಂ ಐಸೊಲೇಷನ್‍ಗೆ ಒಳಗಾಗಿದ್ದಾರೆ. 316 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, ಎಂಟು ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 231 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 39 ಮಂದಿ ಟ್ರಯೇಜ್‍ನಲ್ಲಿದ್ದಾರೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿದೆ.
ತಾಲೂಕುವಾರು ಕೋವಿಡ್ ವಿವರ
ಶಿವಮೊಗ್ಗ ತಾಲೂಕಿನಲ್ಲಿ 152, ಭದ್ರಾವತಿಯಲ್ಲಿ 67, ಶಿಕಾರಿಪುರದಲ್ಲಿ 13, ತೀರ್ಥಹಳ್ಳಿಯಲ್ಲಿ 23, ಸೊರಬದಲ್ಲಿ 17, ಹೊಸನರದಲ್ಲಿ 51, ಸಾಗರದಲ್ಲಿ 53, ಇತರೆ ಜಿಲ್ಲೆಯಿಂದ ಬಂದ 12 ಮಂದಿಗೆ ಸೋಂಕು ತಗುಲಿದೆ.
ಇವತ್ತು ಇಬ್ಬರು ಸಾವು
ಕೋವಿಡ್ ಸೋಂಕಿಗೆ ತುತ್ತಾದ ಇಬ್ಬರು ಇವತ್ತು ಜಿಲ್ಲೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇದರಿಂದ ಕೋವಿಡ್ ಸೋಂಕಿಗೆ ತುತ್ತಾಗಿ ಈವರೆಗೂ ಮೃತಪಟ್ಟವರ ಸಂಖ್ಯೆ 366ಕ್ಕೆ ಏರಿಕೆಯಾದಂತಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






