ಶಿವಮೊಗ್ಗ ಲೈವ್.ಕಾಂ | SHIMOGA | 14 ಡಿಸೆಂಬರ್ 2019
ಮಂದಗತಿಯಲ್ಲಿ ಸಾಗುತ್ತಿರುವ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಚುರುಕು ಮುಟ್ಟಿಸೋಕೆ, ಇವತ್ತು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಯಿತು. ಆರು ತಿಂಗಳಲ್ಲಿ ಶಿವಮೊಗ್ಗಕ್ಕೆ ವಿಮಾನ ಬರಬೇಕು ಎಂದು ಸಭೆಯಲ್ಲಿ ಸಿಎಂ ಸೂಚನೆ ನೀಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೇರಿದಂತೆ ಹಲವರು ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಯಲ್ಲಿ ಏನೆಲ್ಲ ಚರ್ಚೆಯಾಯ್ತು?
ವಿಮಾನ ನಿಲ್ದಾಣ ಕಾಮಾಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು ಕಾಮಗಾರಿ ವೇಗ ಹೆಚ್ಚಿಸಲು ಸಭೆಯಲ್ಲಿ ಸೂಚಿಸಲಾಯಿತು.
ಕಾಮಾಗಾರಿ ವೇಗ ಹೆಚ್ಚಿಸಲು 4 ಜಿ ಅನುಮತಿ ನೀಡಲು ಸಭೆಯಲ್ಲಿ ಸೂಚಿಸಲಾಯಿತು.
ರನ್ ವೇಯನ್ನು 1.2 ಕಿಲೋಮೀಟರ್ ನಿಂದ 2.1 ಕಿಲೋಮೀಟರ್ ಗೆ ಹೆಚ್ಚಿಸಲು ಅನುಮತಿ ನೀಡಲಾಯಿತು.

ಕಾಮಗಾರಿಗೆ ಈಗಾಗಲೇ 40 ಕೋಟಿ ಹಣವನ್ನು ನೀಡಲಾಗಿದ್ದು ತಕ್ಷಣವೇ ಕೆಲಸ ಆರಂಭಿಸಬೇಕು.
ಕಾಮಗಾರಿಗೆ ಈಗಾಗಲೇ 40 ಕೋಟಿ ಹಣವನ್ನು ನೀಡಲಾಗಿದ್ದು ತಕ್ಷಣವೇ ಕೆಲಸ ಆರಂಭಿಸಬೇಕು. ಅದನ್ನು 150 ಕೋಟಿ ರೂ.ಗೆ ಪರಿಷ್ಕರಿಸಲು ಅಗತ್ಯ ಕ್ರಮ ಕೈಗೊಲ್ಳುವುದು.
ಲೋಕೋಪಯೋಗಿ ಇಲಾಖೆ ವತಿಯಿಂದ ವಿಮಾನ ನಿಲ್ದಾಣ ನಿರ್ಮಾಣ. ಎರಡು ಹಂತದಲ್ಲಿ ಕಾಮಗಾರಿಯ ಅನುಷ್ಠಾನ.
ಡಿಸೆಂಬರ್ ಅಂತ್ಯಕ್ಕೆ ವಿಮಾನ ನಿಲ್ದಾಣ ಕಾಂಪೌಂಡ್ ಗೋಡೆ ನಿರ್ಮಾಣ ಕಾಮಗಾರಿ ಪ್ರಾರಂಭ, 2020ರ ಫೆಬ್ರವರಿ ಅಂತ್ಯಕ್ಕೆ ನಿಲ್ದಾಣ ಕಾಮಗಾರಿ ಶುರುಮಾಡಲು ಸಮಯ ನಿಗದಿ.

ಒಂದು ವಾರದೊಳಗೆ ಎಲ್ಲ ರೀತಿಯ ಪೇಪರ್ ವರ್ಕ್ ಮುಗಿಸಿ ಕೆಲಸ ಆರಂಭಿಸಲು ಸೂಚನೆ.
ಇನ್ನು 6 ತಿಂಗಳ ಒಳಗೆ ಶಿವಮೊಗ್ಗದಲ್ಲಿ ವಿಮಾನಗಳು ಹಾರಾಡಬೇಕು. ಇಲ್ಲದಿದ್ದರೆ ಅದಕ್ಕೆ ನೀವೇ ಜವಬ್ದಾರರಾಗುತ್ತೀರ ಅಂತ ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ ನೀಡಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Chief Minister B S Yedyurappa holds a special meeting with the officials and Shimoga MP BY Raghavendra, MLC Rudregowda, DC KB Shivakumar on Airport in Bengaluru.