ಶಿವಮೊಗ್ಗ ಚೆಕ್‌ಪೋಸ್ಟ್‌ನಲ್ಲಿ ಈತನಕ ಏನೆಲ್ಲ ಸೀಜ್‌ ಆಗಿದೆ? ಎಷ್ಟು ಮೌಲ್ಯದ ನಗದು, ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 8 APRIL 2023

SHIMOGA : ನೀತಿ ಸಂಹಿತೆ ಹಿನ್ನೆಲೆ ಜಿಲ್ಲೆಯಾದ್ಯಂತ ಚೆಕ್‌ಪೋಸ್ಟ್‌ಗಳನ್ನು (check post) ಸ್ಥಾಪಿಸಲಾಗಿದೆ. ಪೊಲೀಸ್‌ ಸಿಬ್ಬಂದಿ ಮತ್ತು ಚುನಾವಣಾ ಆಯೋಗದ ಸಿಬ್ಬಂದಿ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಇನ್ನು, ವಿವಿಧೆಡೆ ದಾಳಿ ನಡೆಸಿ ನಗದು, ಮದ್ಯ, ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈತನಕ 10 ಕೋಟಿ ರೂ. ಮೌಲ್ಯದ ನಗದು ಮತ್ತು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga-Police-Barricade-Checkpost

ಈತನಕ ಏನೇನೆಲ್ಲ ವಶಪಡೆಯಲಾಗಿದೆ?

ಶಿವಮೊಗ್ಗ ಜಿಲ್ಲೆಯಾದ್ಯಂತ ವಿವಿಧೆಡೆ ದಾಖಲೆ ಇಲ್ಲದ 3.19 ಕೋಟಿ ರೂ. ನಗದು ವಶಕ್ಕೆ ಪಡೆಯಲಾಗಿದೆ. ಈ ಪೈಕಿ ಶಿವಮೊಗ್ಗ ಮತ್ತು ಭದ್ರಾವತಿ ಕ್ಷೇತ್ರದಲ್ಲಿ ಹೆಚ್ಚಿನ ಮೊತ್ತದ ನಗದು ವಶಪಡಿಸಿಕೊಳ್ಳಲಾಗಿದೆ. ಭದ್ರಾವತಿ ಕ್ಷೇತ್ರದಲ್ಲಿ 1.49 ಕೋಟಿ ರೂ, ಶಿವಮೊಗ್ಗ ಕ್ಷೇತ್ರದಲ್ಲಿ 1.43 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. ಇನ್ನು, ಶಿವಮೊಗ್ಗ ಗ್ರಾಮಾಂತರ 95,140 ರೂ., ತೀರ್ಥಹಳ್ಳಿ 4,95,890 ರೂ., ಸಾಗರ 20,88,660 ರೂ. ವಶಕ್ಕೆ ಪಡೆಯಲಾಗಿದೆ.

ಅಕ್ರಮ ಮದ್ಯ ಸೀಜ್‌

ಜಿಲ್ಲೆಯಾದ್ಯಂತ ಅಕ್ರಮ ಮದ್ಯ ಸಾಗಣೆ ಮತ್ತು ಮಾರಾಟಗಾರರ ಮೇಲೂ ಚುನಾವಣಾಧಿಕಾರಿಗಳು, ಪೊಲೀಸ್‌ ಇಲಾಖೆ ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ. ಜಿಲ್ಲೆಯಾದ್ಯಂತ ಈತನಕ 2366 ಲೀಟರ್‌ ಮದ್ಯ ವಶಕ್ಕೆ ಪಡೆಯಲಾಗಿದೆ. ಇದರ ಅಂದಾಜು ಮೌಲ್ಯ 9,35,783 ರೂ.

Creative gift Shimoga ripponpete

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ 244 ಲೀಟರ್‌, ಭದ್ರಾವತಿಯಲ್ಲಿ  152 ಲೀಟರ್‌, ಶಿವಮೊಗ್ಗದಲ್ಲಿ 165 ಲೀಟರ್‌, ತೀರ್ಥಹಳ್ಳಿಯಲ್ಲಿ 670 ಲೀಟರ್‌, ಶಿಕಾರಿಪುರದಲ್ಲಿ 215 ಲೀಟರ್‌, ಸೊರಬದಲ್ಲಿ 279 ಲೀಟರ್‌, ಸಾಗರದಲ್ಲಿ 599 ಲೀಟರ್‌ ಮದ್ಯ ವಶಕ್ಕೆ ಪಡೆಯಲಾಗಿದೆ.

ಮಾದಕ ವಸ್ತುಗಳು ವಶಕ್ಕೆ

ಜಿಲ್ಲೆಯಾದ್ಯಂತ ಮಾದಕ ವಸ್ತುಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ. ಗಾಂಜಾ ಸೇರಿದಂತೆ ವಿವಿಧ ಮಾದಕ ವಸ್ತುಗಳು ಸಿಕ್ಕಿವೆ. ಒಟ್ಟು 3,95,500 ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಭದ್ರಾವತಿ ಕ್ಷೇತ್ರದಲ್ಲಿ 73,268 ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಉಚಿತ ಕೊಡುಗೆಗಳು ಸೀಜ್‌

ಮತದಾರರಿಗೆ ಹಂಚಲು ಇರಿಸಿದ್ದ ಶಂಕೆ ಮೇರೆಗೆ ದಿನಸಿ ಸೇರಿದಂತೆ ಹಲವು ಉಚಿತ ಕೊಡುಗೆಗಳಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಜಿಲ್ಲೆಯಾದ್ಯಂತ 7,03,92,398 ರೂ. ಮೊತ್ತದ ಕೊಡುಗೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್‌ಗೆ ಹೊದಿಕೆ ಮುಚ್ಚುವಂತೆ ಒತ್ತಾಯ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment