ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS | 8 APRIL 2023
SHIMOGA : ನೀತಿ ಸಂಹಿತೆ ಹಿನ್ನೆಲೆ ಜಿಲ್ಲೆಯಾದ್ಯಂತ ಚೆಕ್‌ಪೋಸ್ಟ್‌ಗಳನ್ನು (check post) ಸ್ಥಾಪಿಸಲಾಗಿದೆ. ಪೊಲೀಸ್ ಸಿಬ್ಬಂದಿ ಮತ್ತು ಚುನಾವಣಾ ಆಯೋಗದ ಸಿಬ್ಬಂದಿ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಇನ್ನು, ವಿವಿಧೆಡೆ ದಾಳಿ ನಡೆಸಿ ನಗದು, ಮದ್ಯ, ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈತನಕ 10 ಕೋಟಿ ರೂ. ಮೌಲ್ಯದ ನಗದು ಮತ್ತು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಈತನಕ ಏನೇನೆಲ್ಲ ವಶಪಡೆಯಲಾಗಿದೆ?
ಶಿವಮೊಗ್ಗ ಜಿಲ್ಲೆಯಾದ್ಯಂತ ವಿವಿಧೆಡೆ ದಾಖಲೆ ಇಲ್ಲದ 3.19 ಕೋಟಿ ರೂ. ನಗದು ವಶಕ್ಕೆ ಪಡೆಯಲಾಗಿದೆ. ಈ ಪೈಕಿ ಶಿವಮೊಗ್ಗ ಮತ್ತು ಭದ್ರಾವತಿ ಕ್ಷೇತ್ರದಲ್ಲಿ ಹೆಚ್ಚಿನ ಮೊತ್ತದ ನಗದು ವಶಪಡಿಸಿಕೊಳ್ಳಲಾಗಿದೆ. ಭದ್ರಾವತಿ ಕ್ಷೇತ್ರದಲ್ಲಿ 1.49 ಕೋಟಿ ರೂ, ಶಿವಮೊಗ್ಗ ಕ್ಷೇತ್ರದಲ್ಲಿ 1.43 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. ಇನ್ನು, ಶಿವಮೊಗ್ಗ ಗ್ರಾಮಾಂತರ 95,140 ರೂ., ತೀರ್ಥಹಳ್ಳಿ 4,95,890 ರೂ., ಸಾಗರ 20,88,660 ರೂ. ವಶಕ್ಕೆ ಪಡೆಯಲಾಗಿದೆ.
ಅಕ್ರಮ ಮದ್ಯ ಸೀಜ್
ಜಿಲ್ಲೆಯಾದ್ಯಂತ ಅಕ್ರಮ ಮದ್ಯ ಸಾಗಣೆ ಮತ್ತು ಮಾರಾಟಗಾರರ ಮೇಲೂ ಚುನಾವಣಾಧಿಕಾರಿಗಳು, ಪೊಲೀಸ್ ಇಲಾಖೆ ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ. ಜಿಲ್ಲೆಯಾದ್ಯಂತ ಈತನಕ 2366 ಲೀಟರ್ ಮದ್ಯ ವಶಕ್ಕೆ ಪಡೆಯಲಾಗಿದೆ. ಇದರ ಅಂದಾಜು ಮೌಲ್ಯ 9,35,783 ರೂ.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ 244 ಲೀಟರ್, ಭದ್ರಾವತಿಯಲ್ಲಿ 152 ಲೀಟರ್, ಶಿವಮೊಗ್ಗದಲ್ಲಿ 165 ಲೀಟರ್, ತೀರ್ಥಹಳ್ಳಿಯಲ್ಲಿ 670 ಲೀಟರ್, ಶಿಕಾರಿಪುರದಲ್ಲಿ 215 ಲೀಟರ್, ಸೊರಬದಲ್ಲಿ 279 ಲೀಟರ್, ಸಾಗರದಲ್ಲಿ 599 ಲೀಟರ್ ಮದ್ಯ ವಶಕ್ಕೆ ಪಡೆಯಲಾಗಿದೆ.
ಮಾದಕ ವಸ್ತುಗಳು ವಶಕ್ಕೆ
ಜಿಲ್ಲೆಯಾದ್ಯಂತ ಮಾದಕ ವಸ್ತುಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ. ಗಾಂಜಾ ಸೇರಿದಂತೆ ವಿವಿಧ ಮಾದಕ ವಸ್ತುಗಳು ಸಿಕ್ಕಿವೆ. ಒಟ್ಟು 3,95,500 ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಭದ್ರಾವತಿ ಕ್ಷೇತ್ರದಲ್ಲಿ 73,268 ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
ಉಚಿತ ಕೊಡುಗೆಗಳು ಸೀಜ್
ಮತದಾರರಿಗೆ ಹಂಚಲು ಇರಿಸಿದ್ದ ಶಂಕೆ ಮೇರೆಗೆ ದಿನಸಿ ಸೇರಿದಂತೆ ಹಲವು ಉಚಿತ ಕೊಡುಗೆಗಳಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಜಿಲ್ಲೆಯಾದ್ಯಂತ 7,03,92,398 ರೂ. ಮೊತ್ತದ ಕೊಡುಗೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್‌ಗೆ ಹೊದಿಕೆ ಮುಚ್ಚುವಂತೆ ಒತ್ತಾಯ






