ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 APRIL 2021
ಕರೋನ ಎರಡನೆ ಅಲೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಬ್ಬ ಸೋಂಕಿತ ಸಾವನ್ನಪ್ಪಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಕರೋನದಿಂದ ಮೃತಪಟ್ಟವರ ಸಂಖ್ಯೆ 352ಕ್ಕೆ ಏರಿಕೆಯಾಗಿದೆ.
ಇವತ್ತೆಷ್ಟು ಮಂದಿಗೆ ಪಾಸಿಟಿವ್?
ಶಿವಮೊಗ್ಗದಲ್ಲಿ ಇವತ್ತು 1435 ಮಂದಿಯ ಸ್ಯಾಂಪಲ್ ಸಂಗ್ರಹಿಸಲಾಗಿದೆ. 2174 ಮಂದಿಯ ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 58 ಮಂದಿಗೆ ಸೋಂಕು ದೃಢವಾಗಿದೆ.
ಯಾವ್ಯಾವ ತಾಲೂಕಿನಲ್ಲಿ ಎಷ್ಟು ಸೋಂಕಿತರು?
ಜಿಲ್ಲೆಯಲ್ಲಿ ಇವತ್ತು ಪಾಸಿಟಿವ್ ಬಂದಿರುವವರ ಪೈಕಿ ಶಿವಮೊಗ್ಗ ತಾಲೂಕಿನ 26, ಭದ್ರಾವತಿಯ ಮೂವರು, ಶಿಕಾರಿಪುರದ ಒಬ್ಬರು, ತೀರ್ಥಹಳ್ಳಿಯ ಎಂಟು, ಸೊರಬದ ಐದು, ಹೊಸನಗರದ 14, ಇತರೆ ಜಿಲ್ಲೆಯಿಂದ ಬಂದಿರುವ ಒಬ್ಬರಿಗೆ ಸೋಂಕು ತಗುಲಿದೆ ಎಂದು ಜಿಲ್ಲಾ ಹೆಲ್ತ್ ಬುಲೆಟಿನ್ನಲ್ಲಿ ತಿಳಿಸಲಾಗಿದೆ.
ಐನೂರರ ಗಡಿ ದಾಟಿದ ಸೋಂಕಿತರು
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಐನೂರರ ಗಡಿ ದಾಟಿದೆ. ಪ್ರಸ್ತುತ ಜಿಲ್ಲೆಯಲ್ಲಿ 539 ಸೋಂಕಿತರಿದ್ದಾರೆ. ಈ ಪೈಕಿ ಕೋವಿಡ್ ಆಸ್ಪತ್ರೆಯಲ್ಲಿ 117 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 62 ಮಂದಿ ಚಿಕಿತ್ಸೆಯಲ್ಲಿದ್ದಾರೆ. ಇನ್ನು, 358 ಮಂದಿ ಹೋಂ ಐಸೊಲೇಷನ್ಗೆ ಒಳಗಾಗಿದ್ದಾರೆ.
ನೀವಿನ್ನೂ ಕೋವಿಡ್ ಲಸಿಕೆ ಪಡೆದಿಲ್ಲವಾ? ಈಗಲೆ ಈ ಕೆಳಗಿರುವ ಫೋಟದಲ್ಲಿನ ನಂಬರ್ಗೆ ನಿಮ್ಮ ಹೆಸರು ನೊಂದಾಯಿಸಿ







