ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಒಬ್ಬರಿಗೆ ಕೆಎಫ್‌ಡಿ ಪಾಸಿಟಿವ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 19 FEBRUARY 2024

SHIMOGA : ಜಿಲ್ಲೆಯಲ್ಲಿ ಕೆಎಫ್‌ಡಿ (ಮಂಗನ ಕಾಯಿಲೆ) ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಮತ್ತೆ ಒಬ್ಬರಿಗೆ ಕೆಎಫ್‌ಡಿ ಪಾಸಿಟಿವ್‌ ಬಂದಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಮೂವರಿಗೆ ಪಾಸಿಟಿವ್‌ ಬಂದಿದೆ ಎಂದು ಸರ್ಕಾರ ಬಿಡುಗಡೆ ಮಾಡಿರುವ ಹೆಲ್ತ್‌ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ 96 ಮಂದಿಯನ್ನು ಪರೀಕ್ಷಿಸಲಾಗಿದೆ. ಒಬ್ಬರಿಗೆ ಪಾಸಿಟಿವ್‌ ಬಂದಿದೆ. ಈವರೆಗೆ ಜಿಲ್ಲೆಯಲ್ಲಿ ಕೆಎಫ್‌ಡಿ ಬಾಧಿತರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 15 ಸಕ್ರಿಯ ಪ್ರಕರಣಗಳಿವೆ.

ಕಳೆದ 24 ಗಂಟೆಯಲ್ಲಿ ಚಿಕ್ಕಮಗಳೂರಿನಲ್ಲಿ ಇಬ್ಬರಿಗೆ ಕೆಎಫ್‌ಡಿ ತಗುಲಿರುವುದು ದೃಢವಾಗಿದೆ.

ಇದನ್ನೂ ಓದಿ – ಶಿರಾಳಕೊಪ್ಪದಲ್ಲಿ ಸ್ಪೋಟ ಪ್ರಕರಣ, ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?

Leave a Comment