ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 13 JUNE 2024
THIRTHAHALLI : ಗಾಂಜಾ ದಂಧೆಕೋರರ ವಿರುದ್ಧ ಜಿಲ್ಲಾ ಪೊಲೀಸರು ಕ್ರಮ ಮುಂದುವರೆಸಿದ್ದಾರೆ. ಈ ಮಧ್ಯೆ ತೀರ್ಥಹಳ್ಳಿ ತಾಲೂಕಿನ ತೋಟವೊಂದರಲ್ಲಿ (Farm) ಅಡಿಕೆ ಮರಗಳ ಮಧ್ಯೆ ಗಾಂಜಾ ಬೆಳೆದಿರುವುದು ಬೆಳಕಿಗೆ ಬಂದಿದೆ.
ಹತ್ತಳ್ಳಿ ಗ್ರಾಮದ ಗುರುಮೂರ್ತಿ ಎಂಬಾತನಿಗೆ ಸೇರಿದ ಅಡಿಕೆ ತೋಟದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ. ಖಚಿತ ಮಾಹಿತಿ ಮೇರೆಗೆ ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ ಸುತಾರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಈ ಸಂದರ್ಭ 9 ಕೆ.ಜಿ. 524 ಗ್ರಾಂ ತೂಕದ 14 ಕೆ.ಜಿ. ಹಸಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ 2.50 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಂಜಾ ವಿರುದ್ಧ ಖಾಕಿ ಸಮರ
ಶಿವಮೊಗ್ಗ ಜಿಲ್ಲೆಯಾದ್ಯಂತ ಗಾಂಜಾ ದಂಧೆಕೋರರ ವಿರುದ್ಧ ಪೊಲೀಸರು ನಿರಂತರ ದಾಳಿ ನಡೆಸಲಾಗುತ್ತಿದೆ. ಗಾಂಜಾ ಮಾರಾಟ ಮಟ್ಟ ಹಾಕುವ ಗುರಿಯೊಂದಿಗೆ ಮಾಹಿತಿ ದೊರೆತಲ್ಲಿ ದಾಳಿ ನಡೆಸಲಾಗುತ್ತಿದೆ. ಗಾಂಜಾ ಕುರಿತು ಸಾರ್ವಜನಿಕರಿಗೆ 112ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಥಂಡಿ ವಾತಾವರಣ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






