NEWS HIGHLIGHTS
SHIMOGA NEWS, 4 NOVEMBER 2024 : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ (Application) ಆಹ್ವನಿಸಲಾಗಿದೆ.
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.ಯಾವೆಲ್ಲ ಯೋಜನೆಗೆ ಅರ್ಜಿ ಸಲ್ಲಿಸಬಹುದು?
ಸ್ವಯಂ ಉದ್ಯೋಗ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ ಮತ್ತು ಗಂಗಾ ಕಲ್ಯಾಣ ಯೋಜನೆಗಳಡಿ ಸೌಲಭ್ಯ ಪಡೆಯಲು ಪರಿಶಿಷ್ಟ ಪಂಗಡಗಳ ಅರ್ಹ ಫಲಾಪೇಕ್ಷಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತರು ಸೇವಾಸಿಂಧು https://sevasindhu.karnataka.gov.in ಮೂಲಕ ನವೆಂಬರ್ 23 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ : 08182-276776 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಿಂದ ಬೆಂಗಳೂರಿಗೆ ಎಷ್ಟು ರೈಲುಗಳಿವೆ, ಟೈಮಿಂಗ್ ಏನು?
![]()