ಶಿವಮೊಗ್ಗ: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮವು 2026-27 ನೇ ಸಾಲಿಗೆ ವಿವಿಧ ಯೋಜನೆಗಳಡಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಲ್ಲಿಸಲು ನವೆಂಬರ್ 30ರಂದು ಕೊನೆಯ ದಿನ. (ಈ ಸುದ್ದಿಯನ್ನು ಇನ್ನು 47 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
2023-24, 2024-25 ಮತ್ತು 2025-26 ನೇ ಸಾಲಿನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿದವರು ಮತ್ತೊಮ್ಮೆ ಸಲ್ಲಿಸುವಂತಿಲ್ಲ. ವಿವಿಧ ಆರ್ಥಿಕ ಯೋಜನೆಗಳಾದ ನೇರ ಸಾಲ ಯೋಜನೆ, ಕುರಿ ಸಾಕಾಣಿಕೆ ಯೋಜನೆ, ಬ್ಯಾಂಕ್ ಸಹಾಯದೊಂದಿಗೆ ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಫಾಸ್ಟ್ ಫುಡ್ ಟ್ರಕ್ ಟ್ರೈಲರ್ / ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆ (1 ರಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರುಗಳಿಗೆ) ಹಾಗೂ ಭೂ ಒಡೆತನ ಯೋಜನೆಗಳಿಗೆ ಸೇವಾ ಸಿಂಧು https://sevaone.karnataka.gov.in/services/ ಪೋರ್ಟಲ್ ಮೂಲಕ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್, ಕಲ್ಯಾಣ ಮಿತ್ರ ಸಹಾಯವಾಣಿ ಸಂ.:9482300400 ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಜಿಲ್ಲಾ ಪಂಚಾಯತ್ ಕಾರ್ಯಾಲಯ, ಕುವೆಂಪು ರಸ್ತೆ, ಶಿವಮೊಗ್ಗ ಇಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.