ತೀರ್ಥಹಳ್ಳಿ/ ಹೊಸನಗರ: 2025– 26ನೇ ಸಾಲಿನ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ತಾಳೆ ಬೆಳೆ ಯೋಜನೆಯಡಿ ಹೊಸದಾಗಿ ತಾಳೆ ಬೆಳೆಯಲು ಇಚ್ಛಿಸುವ ರೈತರಿಗೆ ಸಹಾಯಧನ (Subsidy) ನೀಡಲು ಅವಕಾಶವಿದೆ. ರೈತರು ಸದುಪಯೋಗಪಡಿಸಿಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಉಚಿತವಾಗಿ ತಾಳೆ ಸಸಿ ವಿತರಿಸಿ, ನೆಟ್ಟ ಸಸಿಗಳ ನಿರ್ವಹಣೆಗೆ 3 ವರ್ಷಗಳವರೆಗೆ ಅವಕಾಶವಿರುತ್ತದೆ. ಹೊಸದಾಗಿ ತಾಳೆ ಬೆಳೆ ಅಭಿವೃದ್ಧಿ ಪಡಿಸಲು ಇಚ್ಛಿಸುವ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪಂಗಡದ ರೈತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಮೇ 28 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸುವಂತೆ ಸೂಚಿಸಿದ್ದಾರೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ