ಕೃಷಿಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನ

SHIMOGA NEWS, 30 OCTOBER 2024 : ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಜಿಲ್ಲೆಯ ಆಸಕ್ತ ರೈತರಿಂದ ತಾಲೂಕು ಮತ್ತು ಜಿಲ್ಲಾ ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ (Award) ಅರ್ಜಿ ಆಹ್ವಾನಿಸಲಾಗಿದೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಆತ್ಮ ಯೋಜನೆಯಡಿ ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ವೈಜ್ಞಾನಿಕ ಯಂತ್ರೋಪಕರಣ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ಹಸಿರುಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಸಾಕಾಣಿಕೆ ಚಟುವಟಿಕೆಯಲ್ಲಿ ಸಾಧನೆ ಮಾಡಿದವರು ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.

Agriculture-News-Farmer

ಅರ್ಜಿ ಸಲ್ಲಿಸುವುದು ಹೇಗೆ?

ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ನ.15ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲೆಯ ಎಲ್ಲಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಇದನ್ನೂ ಓದಿ » ವೈರಲ್‌ ಆದ ದೆವ್ವ, ವಾರ್ನಿಂಗ್‌ ನೀಡಿದ ಶಿವಮೊಗ್ಗ ಪೊಲೀಸ್‌

Leave a Comment