SHIVAMOGGA LIVE NEWS | DELHI | 11 ಮೇ 2022
ರಾಜ್ಯ ರಾಜಕಾರಣ ದೆಹಲಿ ಅಂಗಳಕ್ಕೆ ಶಿಫ್ಟ್ ಆಗಿದೆ. ಮಹತ್ವದ ಬೆಳವಣಿಗೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ದೆಹಲಿಗೆ ತೆರಳಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇವತ್ತು ದಿಢೀರ್ ದೆಹಲಿಗೆ ತೆರಳಿದ್ದಾರೆ. ಸಂಜೆ ವೇಳೆಗೆ ಆರಗ ಜ್ಞಾನೇಂದ್ರ ಅವರು ದೆಹಲಿಗೆ ವಿಮಾನ ಹತ್ತಿದ್ದಾರೆ. ಹೈಕಮಾಂಡ್ ಬುಲಾವ್ ಮೇರೆಗೆ ಆರಗ ಜ್ಞಾನೇಂದ್ರ ಅವರು ದೆಹಲಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ದೆಹಲಿಯಲ್ಲಿದ್ದಾರೆ. ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಚರ್ಚೆಸುತ್ತಿದ್ದಾರೆ. ಸಂಪುಟ ವಿಸ್ತರಣೆ ಕುರಿತು ಮಹತ್ವದ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಆರಗ ಜ್ಞಾನೇಂದ್ರ ಅವರು ದೆಹಲಿಗೆ ತೆರಳಿರುವುದು ರಾಜ್ಯ ಮತ್ತು ಜಿಲ್ಲೆಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಇದನ್ನೂ ಓದಿ – ಮಾಜಿ ಸಚಿವ ಕಿಮ್ಮನೆ ರತ್ನಾಕರ್’ಗೆ ಮಾಜಿ ಸಿಎಂ ಸಿದ್ದರಾಮಯ್ಯ ಫೋನ್ ಕರೆ