ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 19 ಏಪ್ರಿಲ್ 2020
ಜಿಲ್ಲೆಯಲ್ಲಿ ಕರೋನ ಸೋಂಕು ಹರಡದಂತೆ ತಡೆಯಲು ಆಶಾ ಕಾರ್ಯಕರ್ತೆಯರು ಮನೆ ಮನೆ ಭೇಟಿ ಆರಂಭಿಸಿದ್ದಾರೆ. ಮನೆಯಲ್ಲಿರುವವರ ಆರೋಗ್ಯದ ಮಾಹಿತಿ ಪಡೆಯತ್ತಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಜಿಲ್ಲೆಯಾದ್ಯಂತ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತೆಯರು ಪರಿಶೀಲನೆ ನಡೆಸುತ್ತಿದ್ದಾರೆ. ಆಯ್ದ ಗ್ರಾಮಗಳಲ್ಲೂ ಪರಿಶೀಲನೆ ನಡೆಯಲಿದೆ.
ಕಳೆದ ನಾಲ್ಕು ದಿನದಲ್ಲಿ ಆಶಾ ಕಾರ್ಯಕರ್ತೆಯರು 60 ಸಾವಿರ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರತಿಯೊಬ್ಬರ ಆರೋಗ್ಯವನ್ನು ತಪಸಣೆ ನಡೆಸುತ್ತಿದ್ದಾರೆ. ಹೋಂ ಕ್ವಾರಂಟೈನ್ ಕಟ್ಟುನಿಟ್ಟಾಗಿ ಪಾಲಿಸುವಂತೆ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ಆಶಾ ಕಾರ್ಯಕರ್ತೆಯರಿಗೆ ಬೆನ್ನೆಲುಬಾದ ಪೊಲೀಸ್
ದೇಶದ ವಿವಿಧೆಡೆ ಕರೋನ ಪರಿಶೀಲನೆಗೆ ತೆರಳಿದ್ದ ವೈದ್ಯಕೀಯ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆದಿದೆ. ಈ ಹಿನ್ನೆಲೆಯಲ್ಲಿ ಮನೆ ಮನೆಗು ತೆರಳುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಪೊಲೀಸರು ಬೆನ್ನಲುಬಾಗಿದ್ದಾರೆ. ಆಶಾ ಕಾರ್ಯಕರ್ತೆಯರ ಜೊತೆಗೆ ಪೊಲೀಸರು ಮನೆಗಳಿಗೆ ಭೇಟಿ ನೀಡುತ್ತಿದ್ದು, ರಕ್ಷಣೆ ಒದಗಿಸುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]