ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಡಿಕ್ಕಿ ಹೊಡೆದು ಬೈಕ್‌ನ್ನು ಎಳೆದೊಯ್ದ ಕಾರು ತಡೆದು, ವೈದ್ಯರೊಬ್ಬರನ್ನು (Doctor) ಸಾರ್ವಜನಿಕರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಶಿವಮೊಗ್ಗದ ಸವಳಂಗ ರಸ್ತೆಯ ಕಮಲಾ ನರ್ಸಿಂಗ್ ಹೋಂ ಮುಂಭಾಗ ಘಟನೆ ಸಂಭವಿಸಿದೆ.
ಎಲೆಕ್ಟ್ರಿಕ್ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಗೆ ಕಾರು ಡಿಕ್ಕಿಯಾಗಿದೆ. ಅಡಿಗೆ ಸಿಲುಕಿದ್ದ ಎಲೆಕ್ಟ್ರಿಕ್ ಬೈಕ್ ಅನ್ನು ಕಾರು ಸ್ವಲ್ಪ ದೂರದ ತನಕ ಎಳೆದೊಯ್ದಿದೆ. ಅಡ್ಡಾದಿಡ್ಡಿ ಚಲಿಸಿದ ಕಾರು ಕಮಲಾ ನರ್ಸಿಂಗ್ ಹೊಂ ಮುಂಭಾಗ ಡಿವೈಡರ್‌ಗೆ ಡಿಕ್ಕಿಯಾಗಿ ನಿಂತಿದೆ ಎಂದು ಆರೋಪಿಸಲಾಗಿದೆ. ಈ ಸಂದರ್ಭ ರೊಚ್ಚಿಗೆದ್ದ ಸಾರ್ವಜನಿಕರು ಕಾರು ಚಲಾಯಿಸುತ್ತಿದ್ದ ವೈದ್ಯರಿಗೆ ಥಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಕಾರಿನ ಬಾನೆಟ್ ಮೇಲೆ ಹತ್ತಿ ಒದ್ದು ಗಾಜು ಪುಡಿಗಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪೂರ್ವ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.



ಇದನ್ನೂ ಓದಿ » ಶಿವಮೊಗ್ಗದಲ್ಲಿ ರೈಲು ಹತ್ತುವ ಭರದಲ್ಲಿ ಬ್ಯಾಗ್ ಬಿಟ್ಟು ಹೋದ ಪ್ರಯಾಣಿಕ
Assault on Doctor in Shimoga city
LATEST NEWS
- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

About The Editor
ನಿತಿನ್ ಆರ್.ಕೈದೊಟ್ಲು















