ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 01 FEBRUARY 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಎಲ್ಲೆಂದರಲ್ಲಿ ಸ್ಪೋಟಕ ಸಿಗುವಂತಾಗಿದೆ. ಒಂದು ವೇಳೆ ಆ ಸ್ಪೋಟಕವನ್ನು ಭಯೋತ್ಪಾದಕರು ಬಳಕೆ ಮಾಡಿಕೊಂಡಿದ್ದರೆ ಏನಾಗುತ್ತಿತ್ತು. ಶಿವಮೊಗ್ಗ ನಗರದಲ್ಲಿ ಎಲ್ಲಿಯಾದರೂ ಸ್ಪೋಟ ಸಂಭವಿಸಿದ್ದರೆ ಪರಿಸ್ಥಿತಿ ಹೇಗಿರುತ್ತಿತ್ತು ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಪ್ರಶ್ನಿಸಿದ್ದಾರೆ.
ಕಲ್ಲಗಂಗೂರಿನ ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣ ಸಂಬಂಧ ವಿಧಾನ ಪರಿಷತ್‍ನಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ಒಂದು ವೇಳೆ ಶಿವಮೊಗ್ಗ ನಗರದಲ್ಲಿ ಸ್ಪೋಟ ಸಂಭವಿಸಿದ್ದರೆ ಭಾರಿ ಅನಾಹುತವಾಗುತ್ತಿತ್ತು. ಗಲಭೆಗಳು ಸಂಭವಿಸಿಬಿಡುತ್ತಿತ್ತೇನೋ ಎಂದು ಆತಂಕ ವ್ಯಕ್ತಪಡಿಸಿದರು.
ಇದನ್ನೂ ಓದಿ | ಕಲ್ಲಗಂಗೂರು ಸ್ಪೋಟ ಕೇಸ್ ವಿಧಾನಸಭೆಯಲ್ಲಿ ಪ್ರಸ್ತಾಪ, ಸಿದ್ದರಾಮಯ್ಯ ಹೇಳಿದ್ದೇನು?
ಸ್ಟೇಷನ್‍ನಲ್ಲಿ ಜಿಲೆಟಿನ್ ಇಟ್ಟಿದ್ದರು
ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ಐಜಿಪಿ ಫ್ಲೈಯಿಂಗ್ ಸ್ಕ್ವಾಡ್ ತಂಡ ದಾಳಿ ನಡೆಸಿ, ಶಿವಮೊಗ್ಗದಲ್ಲಿ ಜಿಲೆಟಿನ್ ಕಡ್ಡಿಗಳ ಬಾಕ್ಸ್ ಗಳನ್ನು ವಶಕ್ಕೆ ಪಡೆದಿದ್ದರು. ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆಯಲ್ಲೇ ಜಿಲೆಟಿನ್ ಬಾಕ್ಸ್ ಗಳನ್ನು ಇರಿಸಿದ್ದರು.
ರೌಂಡ್ಸ್ ಹೋಗುತ್ತಿದ್ದಾಗ ಪೊದೆಯಲ್ಲಿ ಬಾಕ್ಸ್ ಪತ್ತೆಯಾಯ್ತು ಎಂದು ಎಫ್‍ಐಆರ್ ನಲ್ಲಿ ದಾಖಲು ಮಾಡಲಾಗಿದೆ. ಆರೋಪಿಗಳನ್ನು ಬಂಧಿಸಿಲ್ಲ. ಇದು ಸಂಶಯ ಮೂಡಿಸಿದೆ. ಈ ಕುರಿತು ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಯನೂರು ಮಂಜುನಾಥ್ ಆಗ್ರಹಿಸಿದರು.
ಬೋರ್ ಹಾಕಿದರೆ ಕೇಸ್ ಹಾಕ್ತಾರೆ
ರೈತರು ಜಮೀನಿಗೆ ನೀರು ಬೇಕು ಅಂತಾ ಬೋರ್ ಹೊಡೆಸಿದರೆ ಕೇಸ್ ಹಾಕುತ್ತಾರೆ. ಆದರೆ ಇಷ್ಟು ದೊಡ್ಡ ಮಟ್ಟದಲ್ಲಿ ಕ್ವಾರಿಗಳಾಗಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳ ಕ್ರಮ ಕೈಗೊಳ್ಳಲಿಲ್ಲವೇಕೆ ಎಂದು ಪ್ರಶ್ನಿಸಿದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]