ಸಿಗಂದೂರು ದೇಗುಲ ಮುಳುಗಿಸಲು ಯತ್ನಿಸಿದವರಿಂದ ಧರ್ಮಸ್ಥಳ ಯಾತ್ರೆ, ಬೇಳೂರು ಗರಂ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಸಾಗರ: ಹಿಂದುಳಿದ ವರ್ಗದವರ ಸಿಗಂದೂರು ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಸೇರಿಸುವಂತೆ ಪತ್ರ ಬರೆದಿದ್ದ ಯಡಿಯೂರಪ್ಪ, ವಿಜಯೇಂದ್ರ, ಹರತಾಳು ಹಾಲಪ್ಪ ಅವರಿಗೆ ಧರ್ಮಸ್ಥಳ (dharmasthala) ಯಾತ್ರೆ ಮಾಡುವ ನೈತಿಕತೆ ಇಲ್ಲ. ಓಟ್‌ ಬ್ಯಾಂಕ್‌ಗಾಗಿ ಯಾತ್ರೆ ನಡೆಸುತ್ತಿದ್ದಾರೆ ಎಂದು ಅರಣ್ಯ ಕೈಗಾರಿಕಾ ನಿಗಮದ ಅ‍ಧ್ಯಕ್ಷ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ನೆಹರು ಮೈದಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಸಿಗಂದೂರು ದೇವಸ್ಥಾನವನ್ನು ಮುಳುಗಿಸಲು ಪ್ರಯತ್ನ ಮಾಡಿದವರು ಈಗ ಧರ್ಮಸ್ಥಳ ಉಳಿಸಿ ಯಾತ್ರೆ ಮಾಡುತ್ತಿದ್ದಾರೆ. ಎಸ್‌ಐಟಿ ರಚನೆಯಾದಾಗ ಯಡಿಯೂರಪ್ಪ, ವಿಜಯೇಂದ್ರ ಸೇರಿ ಎಲ್ಲರು ಸ್ವಾಗತಿಸಿದ್ದರು. ಈಗ ಎನ್‌ಐಎ ತನಿಖೆಗೆ ವಹಿಸಿ ಎಂದು ಆಗ್ರಹಿಸುತ್ತಿದ್ದಾರೆ. ಇದು ಬಿಜೆಪಿಯ ಇಬ್ಬಗೆಯ ನೀತಿ ತೋರಿಸುತ್ತದೆ.

ಪಿತೂರಿ ಮಾಡಿದವರೆಲ್ಲ ಜೈಲು ಸೇರುತ್ತಿದ್ದಾರೆ

Sagara-Beluru-Gopalakrishna-press-meet
file photo

ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿದ್ದರಿಂದ ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ ಬಯಲಿಗೆ ಬಂದಿದೆ. ಪಿತೂರಿ ನಡೆಸಿದವರು ಒಬ್ಬೊಬ್ಬರಾಗಿ ಜೈಲುಗೆ ಹೋಗತ್ತಿದ್ದಾರೆ. ಇನ್ನಷ್ಟು ಪ್ರಮುಖರ ಮುಖವಾಡ ಬಯಲಿಗೆ ಬರಲಿದೆ ಎಂದರು.

ಭಾರಿ ಮಳೆಯಿಂದಾಗಿ ಮಲೆನಾಡಿನ ಅಡಿಕೆ ಬೆಳೆಗಾರರಿಗೆ ತೀವ್ರ ಸಮಸ್ಯೆಯಾಗಿದೆ. ಬೆಳೆಗಾರರಿಗೆ ನೆರವಾಗಲು ವಿಶೇಷ ಪ್ಯಾಕೇಜ್‌ ಘೋಷಿಸುವಂತೆ ಸದನದಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದೇವೆ. ಮಲೆನಾಡು ಭಾಗದ ಶಾಸಕರು ಮುಖ್ಯಮಂತ್ರಿ ಭೇಟಿಯಾಗಿ ವಿಶೇಷ ಅನುದಾನಕ್ಕೆ ಮನವಿ ಮಾಡಲಿದ್ದೇವೆ.

– ಬೇಳೂರು ಗೋಪಾಲಕೃಷ್ಣ, ಶಾಸಕ

ಇದನ್ನೂ ಓದಿ » ಗೂಗಲ್‌ ಪೇ, ಫೋನ್‌ ಪೇ, ಪೇಟಿಯಂನಲ್ಲಿ ಮಹತ್ವದ ಬದಲಾವಣೆಗೆ NPCI ಸೂಚನೆ

MLA angry against bjp dharmasthala yatre

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment