ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 3 SEPTEMBER 2024 : ರಾಜ್ಯಮಟ್ಟದ ಉತ್ತಮ ಶಿಕ್ಷಕರ (Teachers) ಪ್ರಶಸ್ತಿ ಪಟ್ಟಿ ಪ್ರಕಟಿಸಲಾಗಿದೆ. ಪ್ರಾಥಮಿಕ ಶಾಲೆ ವಿಭಾಗದಲ್ಲಿ 20 ಶಿಕ್ಷಕರು, ಪ್ರೌಢಶಾಲೆ ವಿಭಾಗದಲ್ಲಿ 11 ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಇಬ್ಬರು ಶಿಕ್ಷಕರಿಗೆ ಪ್ರಶಸ್ತಿ ಲಭಿಸಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸೆ.5ರಂದು ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಶಿಕ್ಷಕಿಯರಿಗೆ ಅಕ್ಷರಮಾತೆ ಸಾವಿತ್ರಿಬಾಯಿ ಫುಲೆ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಮಹಾಂತಯ್ಯ ಎಸ್.ಹೊಸಮಠ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಶಿವಮೊಗ್ಗ ಜಿಲ್ಲೆಯ ಇಬ್ಬರಿಗೆ ಪ್ರಶಸ್ತಿ ಪ್ರಾಥಮಿಕ ಶಾಲೆ ವಿಭಾಗದಲ್ಲಿ ಶಿವಮೊಗ್ಗದ ಗುತ್ಯಪ್ಪ ಕಾಲೋನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಭಾಗೀರಥಿ.ಎಂ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರೌಢಶಾಲೆ ವಿಭಾಗದಲ್ಲಿ ತೀರ್ಥಹಳ್ಳಿ ತಾಲೂಕು ಹೊಸೂರು ಗುಡ್ಡೇಕೇರಿಯ ಸರ್ಕಾರಿ ಪ್ರೌಢಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ವೀರೇಶ್.ಟಿ ಅವರಿಗೆ ಪ್ರಶಸ್ತಿ ಲಭಿಸಿದೆ.
ಇದನ್ನೂ ಓದಿ » ಶಿವಮೊಗ್ಗ ನಗರದಲ್ಲಿ ಇವತ್ತು ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಕಂಪ್ಲೀಟ್ ನ್ಯೂಸ್