ಶಿವಮೊಗ್ಗ ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯಿಂದ ಭೂ ಹುಣ್ಣಿಮೆ ಆಚರಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಶಿವಮೊಗ್ಗ ಜಿಲ್ಲೆಯಾದ್ಯಂತ ರೈತಾಪಿ ವರ್ಗ ಭೂಮಿ ಹುಣ್ಣಿಮೆ (BHOOMI HUNNIME) ಹಬ್ಬವನ್ನು ಶ್ರದ್ಧಾ, ಭಕ್ತಿ, ಸಂಭ್ರಮದಿಂದ ಆಚರಿಸಿತು.

Shimoga Nanjappa Hospital

ಭೂಮಿ ಹುಣ್ಣಿಮೆ (BHOOMI HUNNIME) ಸಂದರ್ಭ ಹೊಲ ಗದ್ದೆಗಳಲ್ಲಿ ಬಿತ್ತಿದ ಬೆಳೆ ತೆನೆಗಳಾಗಿ, ಕಾಳು ಗಟ್ಟಿಯಾಗುವ ಹಂತದಲ್ಲಿರುತ್ತದೆ. ಅಷ್ಟೇ ಅಲ್ಲದೆ ಅಡಿಕೆ, ತೆಂಗು, ಬಾಳೆ ಸೇರಿದಂತೆ ವಿವಿಧ ಬೆಳೆಗಳ ಫಸಲು ಚೆನ್ನಾಗಿ ಬಂದಿರುತ್ತದೆ. ಈ ಸಂದರ್ಭದಲ್ಲಿ ಭೂ ತಾಯಿ ಗರ್ಭಿಣಿ ಎಂಬ ನಂಬಿಕೆಯಲ್ಲಿ ರೈತಾಪಿ ವರ್ಗ ಪುರಾತನ ಕಾಲದಿಂದಲೂ ಭೂಮಿ ಹುಣ್ಣಿಮೆ ಹಬ್ಬವನ್ನು ಆಚರಿಸಿಕೊಂಡು ಬರುತ್ತಿದೆ.

ಬಗೆ ಬಗೆ ಅಡುಗೆ (BHOOMI HUNNIME)

ಭೂಮಿ ತಾಯಿಗೆ ಅಂತಲೇ ಬಗೆ ಬಗೆಯ ಅಡುಗೆ ಮಾಡಲಾಗಿತ್ತು. ಅವುಗಳನ್ನು ಚಿತ್ತಾರದಿಂದ ಕೂಡಿದ ಬೆತ್ತ ಅಥವಾ ಬಿದಿರಿನ ಬುಟ್ಟಿಯಲ್ಲಿ ಮನೆಯಿಂದ ತುಂಬಿಕೊಂಡು ಪೂಜೆ ಮಾಡುವ ಸ್ಥಳಕ್ಕೆ ಮನೆಯ ಯಜಮಾನ ತಲೆಯ ಮೇಲೆ ಹೊತ್ತು ಕೊಂಡೊಯ್ಯುವುದು ಸಂಪ್ರದಾಯ.

ಕೆಲವರು ಭತ್ತದ ಗದ್ದೆಯಲ್ಲಿ ಭತ್ತದ ಗಿಡಗಳಿಗೆ ಪೂಜೆ ಮಾಡಿದರೆ, ಅಡಿಕೆ ತೋಟ ಇರುವವರು ಅಡಿಕೆ ಮರಕ್ಕೆ ಸೀರೆಯನ್ನು ಉಡಿಸಿ, ಆಭರಣಗಳನ್ನು ಧರಿಸಿ ಶೃಂಗಾರ ಮಾಡಲಾಗಿತ್ತು. ಕುಟುಂಬದವರೆ ಸೇರಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವರುಗಳಿಗೆ ಹಾಗೂ ಭೂಮಿ ತಾಯಿಗೆ ಬಗೆ ಬಗೆಯ ಅಡುಗೆಗಳನ್ನು ನೈವೇದ್ಯ ಮಾಡಿ ಒಂದು ಎಡೆಯನ್ನು ಗದ್ದೆಯಲ್ಲಿ ಇಟ್ಟು, ಭೂಮಿ ತಾಯಿಯ ಬಳಿ ಉತ್ತಮ ಫಸಲನ್ನು ನೀಡಿ ನಮ್ಮ ಕುಟುಂಬಕ್ಕೆ ಒಳ್ಳೆಯದನ್ನು ಮಾಡಲಿ ಎಂದು ಬೇಡಿಕೊಂಡರು.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದಲ್ಲಿ ಅದ್ಧೂರಿ ಈದ್ ಮಿಲಾದ್ ಮೆರವಣಿಗೆ, ಹೇಗಿತ್ತು ವೈಭವ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment